ಆಂಗ್ ಸಾನ್ ಸೂಕಿ ನೇತೃತ್ವದ ಪಕ್ಷದ ಮಾನ್ಯತೆ ರದ್ದು ಮಾಡಿದ ಮ್ಯಾನ್ಮಾರ್ ಚುನಾವಣಾ ಆಯೋಗ..!
ಮ್ಯಾನ್ಮಾರ್ : ಮ್ಯಾನ್ಮಾರ್ ನಲ್ಲಿ ಸದ್ಯ ಸೇನಾ ಸರ್ಕಾರದ ಅಧಿಕಾರವಿದೆ.. ಆಂಗ್ ಸಾನ್ ಸೂಕಿ ಹಾಗೂ ಅವರ ನ್ಯಾಶನಲ್ ಲೀಗ್ ಫಾರ್ ಡೆಮಾಕ್ರಾಸಿ ಪಾರ್ಟಿಯ ಅನೇಕ ನಾಯಕರನ್ನೂ ಬಂಧನದಲ್ಲಿರಿಸಿದೆ. ಇದನ್ನ ವಿರೋಧಿಸಿ ಅಲ್ಲಿನ ಜನರು ಪ್ರಜಾಪ್ರಭುತ್ವದ ಮರುಸ್ಥಾಪನೆಗಾಗಿ ಉಗ್ರ ಹೋರಾಟ ನಡೆಸುತ್ತಿದ್ದಾರೆ..
ಅಲ್ಲದೇ ಮಿಲಿಟರಿ ಸೇನೆ ನೂರಾರು ಜನರ ಜೀವ ತೆಗೆದಿದೆ.. ಈ ನಡುವೆ ನ್ಯಾಶನಲ್ ಲೀಗ್ ಫಾರ್ ಡೆಮಾಕ್ರಾಸಿ ಪಾರ್ಟಿಯನ್ನು ವಿಸರ್ಜಿಸಲಾಗುವುದೆಂದು ಮ್ಯಾನ್ಮಾರ್ ನ ಸೇನಾಡಳಿತ ನೇಮಿತ ಚುನಾವಣಾ ಆಯೋಗವು ಪ್ರಕಟಿಸಿದೆ.
ಹೌದು.. ನವೆಂಬರ್ ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸೂಕಿ ನೇತೃತ್ವದ ಪಕ್ಷವು ವಂಚನೆ ಎಸಗಿದೆ. ಈ ಹಿನ್ನೆಲೆಯಲ್ಲಿ ಅದರ ಮಾನ್ಯತೆಯನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆಂದು ಅಲ್ಲಿನ ಮಾಧ್ಯಮವು ವರದಿ ಮಾಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.









