ಮ್ಯಾನ್ಮಾರ್: ಆಂಗ್ ಸಾನ್ ಸೂಕಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಮಿಲಿಟರಿ ಸೇನೆ..!
ಮ್ಯಾನ್ಮಾರ್ ನ ಪದಚ್ಯುತ ನಾಯಕಿ ಆಂಗ್ ಸಾನ್ ಸೂ ಕಿ ಅವರ ವಿರುದ್ಧ ಮ್ಯಾನ್ಮಾರ್ ನ ಮಿಲಿಟರಿ ಆಡಳಿತ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿದೆ. ಸೂ ಕಿ ಅವರು ಅಕ್ರಮವಾಗಿ 11 ಕೆ.ಜಿ ಚಿನ್ನ ಹಾಗೂ 6 ಲಕ್ಷ ಡಾಲರ್ ಸ್ವೀಕರಿಸಿದ್ದಾರೆ ಎಂಬ ಆರೋಪಗಳನ್ನು ಹೊರಿಸಿದೆ.
ಈ ಬಗ್ಗೆ‘ಗ್ಲೋಬಲ್ ನ್ಯೂ ಲೈಟ್ ಆಫ್ ಮ್ಯಾನ್ಮಾರ್’ ಸರ್ಕಾರಿ ಒಡೆತನದ ಪತ್ರಿಕೆಯಲ್ಲಿ ವರದಿಯಾಗಿದೆ. ಸೂ ಕಿ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ಎಸಗಿದ್ದು, ಭ್ರಷ್ಟಾಚಾರ ವಿರೋಧಿ ಆಯೋಗವು ಈ ಆರೋಪಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಎಂದೂ ವರದಿಯಾಗಿದೆ.
ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ತಮ್ಮ ಒಡೆತನದ ಚಾರಿಟಬಲ್ ಪ್ರತಿಷ್ಠಾನಗಳಿಗೆ ಜಮೀನನ್ನು ಬಾಡಿಗೆಗೆ ನೀಡಿದ್ದರು. ದೇಶದ್ರೋಹ ಹಾಗೂ ಹಲವಾರು ಕ್ರಿಮಿನಲ್ ಆರೋಪಗಳನ್ನು ಸಹ ಸೂ ಕಿ ಅವರ ವಿರುದ್ಧ ಹೊರಿಸಲಾಗಿದೆ ಎಂದು ವರದಿ ಮಾಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.