ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೆಮ್ಮಾರಿ ಕೊರೊನಾ ವೈರಸ್ ನ ಆರ್ಭಟ ಜೋರಾಗಿದೆ. ಕಳೆದ ಒಂದು ವಾರದಲ್ಲಿ ಮೈಸೂರಿನಲ್ಲಿ ಬರೋಬ್ಬರಿ 1300 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, 45 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದು ಇಡೀ ಮೈಸೂರನ್ನು ಆತಂಕಕ್ಕೆ ಒಳಗಾಗಿಸಿದೆ.
ಪ್ರಮುಖವಾಗಿ ಮೈಸೂರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಲು ಕಾರ್ಖಾನೆಗಳೇ ಕಾರಣ ಎನ್ನಬಹುದು. ಮೈಸೂರಿನ ಪ್ರತಿಷ್ಠಿತ ಜೆ.ಕೆ. ಟೈರ್ಸ್ ಕಂಪನಿಯ ಕಾರ್ಮಿಕರಲ್ಲಿ ಹೆಚ್ಚಾಗಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಜೊತೆಗೆ ಇನ್ನೂ ಹಲವು ಕಾರ್ಖಾನೆಗಳಲ್ಲಿ ಸಾಮೂಹಿಕವಾಗಿ ಸೋಂಕು ಹಬ್ಬಿದೆ ಎಂದು ಹೇಳಲಾಗುತ್ತಿದೆ.
ಸದ್ಯ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲಾಡಳಿತ 5 ಸಾವಿರ ಬೆಡ್ ಗಳ ಆಸ್ಪತ್ರೆಯ ವ್ಯವಸ್ಥೆ ಮಾಡಿಕೊಳ್ಳುತ್ತಿದೆ.








