ಮೈಸೂರು: ಮೈಸೂರು ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಧ್ಯಕ್ಷ ಸ್ಥಾನ ಹಾಗೂ ಜೆಡಿಎಸ್‌ಗೆ ಉಪಾಧ್ಯಕ್ಷ ದಕ್ಕಿದೆ.
ಇಂದು ನಡೆದ ಚುನಾವಣೆಯಲ್ಲಿ ಮೂವರು ನಾಮ ನಿರ್ದೇಶನ ಸದಸ್ಯರನ್ನು ಒಳಗೊಂಡAತೆ ಒಟ್ಟು 16 ಸದಸ್ಯ ಬಲದ ಎಪಿಎಂಸಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಸವರಾಜು ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಂ. ನಾಗರಾಜು ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಆದರೆ, ಎರಡೂ ಸ್ಥಾನಗಳಿಗೆ ತಲಾ ಎಂಟು ಎಂಟು ಮತಗಳು ಬಂದವು. ಅಧ್ಯಕ್ಷ ಸ್ಥಾನಕ್ಕೆ ಕೈ ಬೆಂಬಲಿತ ಬಸವರಾಜು ಹಾಗೂ ಜೆಡಿಎಸ್ ಬೆಂಬಲಿತ ಕೋಟೆಹುಂಡಿ ಮಹದೇವು ಸ್ಪರ್ಧೆ ಸ್ಪರ್ಧಿಸಿದ್ದರು. ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ದೂರ ಎಂ. ನಾಗರಾಜು, ಕಾಂಗ್ರೆಸ್ ಬೆಂಬಲಿತ ಆನಂದ್ ತಲಾ ಎಂಟು ಮತ ಬಂದವು. ಈ ಎರಡೂ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಭ್ಯರ್ಥಿಗಳು ತಲಾ ಎಂಟು ಮತ ಪಡೆದು ಸಮಬಲ ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ರಕ್ಷಿತ್ ಲಾಟರಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಲು ತೀರ್ಮಾನಿಸಿದರು. ಇದರಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಬಸವರಾಜು ಅಧ್ಯಕ್ಷರಾಗಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಂ. ನಾಗರಾಜು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಚುನಾವಣಾಧಿಕಾರಿ ರಕ್ಷಿತ್ ವಿಜೇತರ ಹೆಸರನ್ನು ಅಧಿಕೃತವಾಗಿ ಘೋಷಿಸಿದರು.
ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಬಸವರಾಜು, ನಾನು ಇನ್ನೂ ಎರಡು ಮತಗಳನ್ನು ಹೆಚ್ಚುವರಿಯಾಗಿ ಪಡೆದು ಗೆಲ್ಲುವ ವಿಶ್ವಾಸವಿತ್ತು. ಆದರೆ ಕಾಣದ ಕೈಯಗಳ ಪ್ರಭಾವದಿಂದಾಗಿ ಸಮ ಮತಗಳನ್ನು ಪಡೆದು ಲಾಟರಿ ಮುಖಾಂತರ ಆಯ್ಕೆಯಾಗಬೇಕಾಯಿತು. ಅದೃಷ್ಟ ಪರೀಕ್ಷೆಯಲ್ಲಿ ಗೆಲುವು ನನ್ನದಾಯಿತು. ಮುಂದೆ ಎಪಿಎಂಸಿ ಅಭಿವೃದ್ಧಿಗೆ ರೈತರು, ದಲ್ಲಾಳಿಗಳು, ವರ್ತಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದರು.
cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!
800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...








