Mysore APMC : ನೂತನ ಭತ್ತ ಹಾಗೂ ರಾಗಿ ಖರೀದಿ ಕೇಂದ್ರಕ್ಕೆ – ಎಸ್. ಟಿ ಸೋಮಶೇಖರ್ ಚಾಲನೆ…
ಮೈಸೂರಿನ APMC ಆವರಣದಲ್ಲಿ ನೂತನ ಭತ್ತ ಹಾಗೂ ರಾಗಿ ಖರೀದಿ ಕೇಂದ್ರಕ್ಕೆ ಸಹಕಾರ ಸಚಿವ ಎಸ್. ಟಿ ಸೋಮಶೇಖರ್ ನಿನ್ನೆ ಚಾಲನೆ ನೀಡಿದರು. ಬೆಂಬಲ ಬೆಲೆ ಯೋಜನೆಯಡಿ ರಾಗಿ ಹಾಗೂ ಭತ್ತವನ್ನು ತಲಾ 50 ಲಕ್ಷ ಕ್ವಿಂಟಾಲ್ ನಂತೆ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ತಿಳಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಎಸ್.ಟಿ.ಸೋಮಶೇಖರ್ ಮಾತನಾಡಿ “ ರಾಜ್ಯದ ಸುಮಾರು 12 ಜಿಲ್ಲೆಗಳಿಂದ ಧಾನ್ಯ ಖರೀದಿಯಾಗಲಿದ್ದು, ಖರೀದಿಗೆ ನೋಂದಾಯಿಸಿಕೊಳ್ಳಲು ರೈತರಿಗೆ ಈ ವರ್ಷದ ಮಾರ್ಚ್ 31 ರವರೆಗೆ ಕಾಲಾವಕಾಶ ನೀಡಲಾಗಿದೆ. ಇದೇ ರೀತಿ ಕೊಬ್ಬರಿ ಖರೀದಿ ಕೇಂದ್ರಗಳನ್ನೂ ಸದ್ಯದಲ್ಲೇ ತೆರೆಯಲಾಗುತ್ತಿದ್ದು ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಬಳಿಕ ಟಿ. ನರಸೀಪುರದಲ್ಲಿ ನಡೆಯುತ್ತಿರುವ ಸರಣಿ ಚಿರತೆ ದಾಳಿ ಕುರಿತು ಮಾತನಾಡಿ “ಮಾಹಿತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರು ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆ ಭಾಗದ ಮುಖಂಡರೊಂದಿಗೆ ಸಭೆ ನಡೆಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
Mysore APMC: ST Somashekhar Drives New Paddy and Millet Purchase Center…