Mysore – ರಾಷ್ಟ್ರಪತಿ ಆಗಮನ | ಸಾರ್ವಜನಿಕರಿಗೆ ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ದಿನ ಗಣನೆ ಆರಂಭವಾಗಿದೆ.
ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ನೆರವೇರಿಸಲು ಜಿಲ್ಲಾಡಳಿತ ಪ್ಲಾನ್ ಮಾಡಿಕೊಂಡಿದೆ.
ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಕ್ಕೆ ಬರುತ್ತಿದ್ದು, ಮೈಸೂರು ದಸರಾ ಉದ್ಘಾಟಿಸಲಿದ್ದಾರೆ. ಅವರ ಸ್ವಾಗತಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗಿದೆ.
ನಾಳೆ ವಿಶ್ವ ಪ್ರಸಿದ್ಧ ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟನೆ ಮಾಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ನಾಳೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.
ನಾಳೆ ಬೆಳಗ್ಗೆಯಿಂದ 11.30 ರವರೆಗೆ ಸಾರ್ವಜನಿಕರಿಗೆ ಚಾಮುಂಡಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.
ಆದ್ರೆ ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಹುದು.
ಕಾರ್ಯಕ್ರಮ ಮುಗಿದ ಬಳಿಕ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಪ್ರಕಟಣೆ ಹೊರಡಿಸಿದ್ದಾರೆ.