Mysore | ಸೆ.26 ರಿಂದ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಇದೇ ಸೋಮವಾರ ಉದ್ಘಾಟನೆಯಾಗಲಿದ್ದು, ಇದೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ದಸರಾ ಉದ್ಘಾಟನೆ ಮಾಡಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 26 ರಂದು ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಸೆಪ್ಟಂಬರ್ 6 ರಂದು ಸೋಮವಾರ ಬೆಳಗ್ಗೆ 6 : 15ಕ್ಕೆ ರಾಷ್ಟ್ರಪತಿ ದ್ರೌಪದಿ ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಟು ನೇರವಾಗಿ ಬೆಳಗ್ಗೆ 9 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಅಲ್ಲಿಂದ ನೇರವಾಗಿ ಚಾಮುಂಡಿಬೆಟ್ಟಕ್ಕೆ ತಲುಪಿ, ಬೆಳಗ್ಗೆ 10 ಕ್ಕೆ ಚಾಮುಂಡೇಶ್ವರಿಗೆ ಪಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವದ ಉದ್ಘಾಟನೆ ನೆರವೇರಿಸಲಿದ್ದಾರೆ. mysore-dasara-mahotsava