ಮೈಸೂರು: ನಂಜನಗೂಡು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಜಿಲ್ಲಾ ಪಂಚಾಯತಿ ಸಿಇಓ ಪ್ರಶಾಂತ್ ಮಿಶ್ರ ಅಮಾನತಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವೈದ್ಯರು ಹಿಂಪಡೆದಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ನೀಡಿದ ಭರವಸೆ ಮೇರೆಗೆ ಸರ್ಕಾರಿ ವೈದ್ಯರ ಸಂಘದವರು ಇಂದು ಸಭೆ ನಡೆಸಿ ಕರ್ತವ್ಯಕ್ಕೆ ಹಾಜರಾಗಲು ತೀರ್ಮಾನಿಸಿದ್ದಾರೆ.
ಕೋವಿಡ್-19ನಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ನಾವು ಪ್ರತಿಭಟನೆ ನಡೆಸಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಆದರೆ ವೈದ್ಯರಿಗೆ ಕಿರುಕುಳ, ಒತ್ತಡ ಹೇರುವಂತಹ ಇದೇ ಪರಿಸ್ಥಿತಿ ಮುಂದುವರೆದರೆ ನಮ್ಮ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತದೆ ಎಂಬ ಎಚ್ಚರಿಕೆ ನೀಡಿ ಸದ್ಯ ಮೈಸೂರಿನ ಜಿಲ್ಲಾ ಆರೋಗ್ಯ ಅಕಾರಿಗಳ ಕಚೇರಿ ಎದುರು ನಡೆಸುತ್ತಿರುವ ಹೋರಾಟವನ್ನು ಹಿಂಪಡೆಯುತ್ತಿರುವುದಾಗಿ ವೈದ್ಯಾಕಾರಿಗಳ ಸಂಘ ತಿಳಿಸಿದೆ.
ಅಧಿಕಾರಿಗಳು ವೈದ್ಯರ ಮೇಲೆ ಅನಗತ್ಯ ಪ್ರಲಾಪವನ್ನು ನಿಲ್ಲಿಸಬೇಕು. ಸರ್ಕಾರ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದು ವೈದ್ಯಾಧಿಕಾರಿಗಳ ಸಂಘ ಎಚ್ಚರಿಕೆ ನೀಡಿದೆ.