Mysore – ಗ್ರಹಣ ಎಫೆಕ್ಟ್ | ಚಾಮುಂಡಿ ತಾಯಿಯ ದರ್ಶನಕ್ಕೆ ಬ್ರೇಕ್
ಮೈಸೂರು : ಇಂದು ಕೇತುಗ್ರಸ್ತ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ದೇವಾಲಯವನ್ನು ಬಂದ್ ಮಾಡಲಾಗಿದೆ.
ಇಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆಯವರೆಗೂ ದೇವಿ ದರ್ಶನಕ್ಕೆ ಜನರಿಗೆ ಅವಕಾಶ ಕಲ್ಪಿಸಲಾಗಿತ್ತು.
ಇದೀಗ ಮಧ್ಯಾಹ್ನ ಒಂದು ಗಂಟೆಯ ಬಳಿಕ ದೇಗುಲ ಬಂದ್ ಮಾಡಲಾಗಿದೆ.
ಗ್ರಹಣ ಸ್ಪರ್ಶ, ಮೋಕ್ಷ ಕಾಲದಲ್ಲಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ನಡೆಯಲಿದೆ.