Mysore | ಮಗನ ಮುಂದೆಯೇ ತಂದೆಯ ಭೀಕರ ಹತ್ಯೆ!
ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ಘಟನೆ
ಸಂಪತ್ ಕುಮಾರ್ ಕೊಲೆಯಾದ ವ್ಯಕ್ತಿ
ಮನೆಗೆ ನುಗ್ಗಿ ದುಷ್ಕರ್ಮಿಗಳಿಂದ ಕೊಲೆ
ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಮೈಸೂರು : ಮಗನ ಮುಂದೆಯೇ ತಂದೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ನಡೆದಿದೆ.
ಸಂಪತ್ ಕುಮಾರ್ ಕೊಲೆಯಾದರಾಗಿದ್ದಾರೆ. ಇವರು ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಅಗರಬತ್ತಿ ವ್ಯಾಪಾರಿ ಯಾಗಿದ್ದಾರೆ.
ಇಂದು ಸಂಪತ್ ಕುಮಾರ್ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ರಾಡ್ನಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆಗೈದಿದ್ದಾನೆ.

ಸಂಪತ್ ಮನೆಯಲ್ಲಿ ಮಗ ಜೊತೆ ಇದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಇನ್ನು ಈ ಘಟನೆ ಸಂಬಂಧ ಸಂಪತ್ ಕುಮಾರ್ ಪತ್ನಿ ಗಾಯತ್ರಿ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ.








