ಅರಮನೆ ನಗರಿ ಮೈಸೂರಿನಲ್ಲೂ ವರುಣಾರ್ಭಟ ಜೋರಾಗಿದೆ. ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನಲೆ ನಂಜನಗೂಡಿನಲ್ಲಿ ಪ್ರವಾಹದ ಭೀತಿ ಎದುರಾಗಿದೆ. ನೀರು ಹರಿದು ತಗ್ಗು ಪ್ರದೇಶಗಳು ಹಳ್ಳದಕೇರಿ, ಒಕ್ಕಲಗೇರಿ ಬಡಾವಣೆಗಳು ಜಲಾವೃತವಾಗಿದ್ದು, ಬಡಾವಣೆ ನಿವಾಸಿಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ನಗರಸಭೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಟಾಂ ಟಾಂ ಮಾಡಿಸಿ ಈ ಬಗ್ಗೆ ಸೂಚನೆ ನೀಡಲಾಗಿದೆ. ಇನ್ನೂ ಈಗಾಗಲೇ ಸಾಕಷ್ಟು ಕುಟುಂಬಗಳು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರವಾಗಿವೆ.ಇತ್ತ ಕೇರಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹೊರಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದ್ದು, ಆತಂಕದ ವಾತಾರವಣ ನಿರ್ಮಾಣವಾಗಿದೆ. ಇನ್ನೂ ಹುಣಸೂರು ಸುತ್ತಮುತ್ತಲೂ ಬಿಟ್ಟು ಬಿಡದೇ ಸುರಿಯುತ್ತಿರುವ ಬಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದರಿಂದಾಗಿ ಲಕ್ಷ್ಮಣ ತೀರ್ಥದಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ನದಿ ಪಾತ್ರದ ಮನೆಗಳಿಗೂ ನೀರು ನುಗ್ಗುತ್ತಿರುವ ಪರಿನಾಮ ಜನರು ಮನೆ ತೊರೆಯುವ ಪರಿಸ್ಥಿತಿ ಬಂದೊದಗಿದೆ. ಇತ್ತ ರೈತರು ಕಷ್ಟ ಪಟ್ಟು ಬೆಳೆದ ಮೆಕ್ಕ ಜೋಳ ಹಾಗೂ ಇತರೇ ಬೆಳೆಗಳು ನೀರುಪಾಲಾಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.
ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...








