Mysore | ವಿಜಯೇಂದ್ರಗೆ ಟಿಕೆಟ್ ನಿರಾಕರಿಸಿದ ಹೈಕಮಾಂಡಿಗೆ ನನ್ನ ಸೆಲ್ಯೂಟ್
ಮೈಸೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಪರಿಷತ್ ಟಿಕೆಟ್ ಮಿಸ್ ಆಗಿರುವ ಬಗ್ಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ವಿಜಯೇಂದ್ರ ಅವರಿಗೆ ಟಿಕೆಟ್ ನೀಡುವಂತೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೈಕಮಾಂಡ್ ಗೆ ಮನವಿ ಮಾಡಿದ್ದರು. ಆದ್ರೂ ಹೈಕಮಾಂಡ್ ವಿಜಯೇಂದ್ರರಿಗೆ ಟಿಕೆಟ್ ನೀಡಿಲ್ಲ.
ಬದಲಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಬಗ್ಗೆ ಭರವಸೆ ನೀಡಿದೆ. ಆದ್ರೆ ಈಗ ಪರಿಷತ್ ಚುನಾವಣೆಯಲ್ಲಿ ಯಾಕೆ ಟಿಕೆಟ್ ನೀಡಿಲ್ಲ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.
ಕೆಲವು ಮೂಲಗಳ ಪ್ರಕಾರ ಬಿಜೆಪಿಯಲ್ಲಿಯೇ ಬಿಎಸ್ ವೈ ವಿರೋಧಿ ಬಣ ವಿಜಯೇಂದ್ರಗೆ ಟಿಕೆಟ್ ತಪ್ಪಿಸಿದೆಯಂತೆ.
ಇದು ಏನೇ ಇದ್ದರೂ ಈ ವಿಚಾರವಾಗಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು, ವಿಜಯೇಂದ್ರಗೆ ಟಿಕೆಟ್ ನಿರಾಕರಿಸಿದ ಹೈಕಮಾಂಡಿಗೆ ನನ್ನ ಸೆಲ್ಯೂಟ್ ಎಂದಿದ್ದಾರೆ. ಇದು ಬಿಜೆಪಿ ಹಾಗೂ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಅಲ್ಲದೇ ವಿಶ್ವನಾಥ್ ಮುಂದುವರೆದು ವಿಜಯೇಂದ್ರನಿಗೆ ಟಿಕೆಟ್ ನೀಡದಿರುವುದು ಒಳ್ಳೆಯದೇ ಆಯ್ತು, ಬೇಕಿದ್ದರೆ ಚುನಾವಣೆಯಲ್ಲಿ ಗೆದ್ದು ಬರಲಿ, ಕಳೆದ ಬಾರಿ ಬಂದಿದ್ದಂತೆ ಮುಂದೆಯೂ ವರುಣಕ್ಕೆ ಬಂದು ಸ್ಪರ್ಧೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.
ವಿಜಯೇಂದ್ರ ಇಲ್ಲದೇ ಬಿಜೆಪಿ ಇಲ್ಲವೋ? ನಿಮ್ಮಪ್ಪನ ಜೈಲಿಗೆ ಕಳುಹಿಸಿದ್ದು ಯಾರು? ನಿಮ್ಮಪ್ಪ ಅಧಿಕಾರದಿಂದ ಇಳಿಯಲು ನೀನೇ ಕಾರಣ ಅಲ್ಲವಾ? ಎಂದು ವಿಶ್ವನಾಥ್ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. Mysore-h-vishwanath-spoke-about-b-y-vijayendra