ತಂದೆಯ ಶವ ಬೇಡ, ದುಡ್ಡು ಬೇಕು…! ಅಮಾನವೀಯತೆ ಮೆರೆದ ಪಾಪಿ ಪುತ್ರ..!
ಮೈಸೂರು: ಪಾಪಿ ಪುತ್ರನೋರ್ವ ಅಮಾನವೀಯತೆಯ ಎಲ್ಲಾ ಹದ್ದನ್ನ ಮೀರಿರುವಂತಹ ಘಟನೆಯೊಂದು ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.. ತಂದೆ ಕೊರೊನಾದಿಂದ ಮೃತಪಟ್ಟಿದ್ರೆ, ಅವರ ಅಂತಿಮ ದರ್ಶನವನ್ನೂ ಪಡೆಯಲು ಬಾರದ ಮಗ ಶವ ಬೇಡ, ಹಣ ಬೇಕು ಎಂದಿದ್ದಾನೆ…
ತಂದೆಯ ಶವ ನೀವೇ ಸುಟ್ಟು ಹಾಕಿ, ತಂದೆ ಮನೆಯಲ್ಲಿ ಇಟ್ಟಿರುವ ಹಣವನ್ನು ನಾನು ಇರುವ ಸ್ಥಳಕ್ಕೆ ತಂದು ಕೊಡಿ. ನೀವು ಮಾಡಿರುವ ಖರ್ಚನ್ನು ಅದೇ ಹಣದಲ್ಲಿ ಕೊಡುತ್ತೇನೆ ಎಂದಿದ್ದಾನೆ..
ತಂದೆ ಕೊರೊನಾಗೆ ಬಲಿಯಾಗಿದ್ದರು.. ಆದ್ರೆ ಮಗ ಅವರಿಂದ ದೂರ ಇದ್ದ… ಬಳಿಕ ಮಗನಿಗೆ ಸ್ಥಳೀಯ ಮಹಾ ನಗರ ಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್ ಫೋನ್ ಮಾಡಿ ವಿಷಯ ಮುಟ್ಟಿಸಿದ್ದಾರೆ. ಆಗ ಮಗ, ತಂದೆಯ ಅಂತ್ಯಕ್ರಿಯೆ ನೀವೆ ಮುಗಿಸಿ. ಆದರೆ ತಂದೆಯ ಬಳಿ ಇರುವ 6 ಲಕ್ಷ ಹಣ ಹಾಗೂ ಇನ್ನಿತರೆ ದಾಖಲೆಗಳನ್ನು ತಂದು ಕೊಡಿ. ನಾನು ಮೈಸೂರಿನ ಕುವೆಂಪು ನಗರದ ಶಾಂತಿ ಸಾಗರ್ ಕಾಂಪ್ಲೆಕ್ಸ್ ಬಳಿ ಇದ್ದೇನೆ. ಅಲ್ಲಿಗೆ ಹಣ , ದಾಖಲೆ ಎಲ್ಲಾ ತಂದು ಕೊಟ್ಟು ಬಿಡಿ ಎಂದ ಹೇಳಿದ್ದಾನೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.