ಮೈಸೂರು | ಮೂವರು ದರೋಡೆಕೋರರು ಅರೆಸ್ಟ್
ಮೈಸೂರು : ಐಟಿ ಉದ್ಯೋಗಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ ನಗದು, ಬೈಕ್ ದೋಚಿದ್ದ ನಟೋರಿಯಸ್ ಕ್ರಿಮಿನಲ್ ಗಳನ್ನು ಬಂಧಿಸುವಲ್ಲಿ ಮೇಟಗಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಮೈಸೂರಿನ ಬೆಲವತ್ತ ಗ್ರಾಮದ ಆರ್. ಪ್ರವೀಣ, ಬಿಎಂಶ್ರೀ ನಗರದ ಎನ್. ಶಿವಕುಮಾರ್ , ಹುಣಸೂರು ತಾಲೂಕಿನ ವಿ.ಪಿ ಬೋರೆ ನಿವಾಸಿ ರಘು ಎಂದು ಗುರುತಿಸಲಾಗಿದೆ.
ಇವರು ಫೆಬ್ರವರಿ ಒಂದರಂದು ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸೇಲಂ ಮೂಲದ ವ್ಯಕ್ತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಹಲ್ಲೆ ನಡೆಸಿ, ಆತನ ಬಳಿಯಿದ್ದ ಎಟಿಎಂ ಕಾರ್ಡ್ ಗಳನ್ನು ಕಿತ್ತುಕೊಂಡು ಜೀವ ಬೆದರಿಕೆಯೊಡ್ಡಿದ್ದರು.
ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡ ಮೇಟಗಳ್ಳಿ ಪೊಲೀಸರು ಕಾರ್ಯಾಚರಣೆ ಮಾಡಿ, ಮೂವರನ್ನು ಬಂಧಿಸಿದ್ದಾರೆ. ಅವರಿಂದ 42 ಸಾವಿರ ರೂ. ನಗದು, 2 ದ್ವಿಚಕ್ರ ವಾಹನ ಹಾಗೂ ಮೂರು ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel