ಭೋಪಾಲ್: ಮಧ್ಯಪ್ರದೇಶದ (Madhya Pradesh)ಲ್ಲಿ ನಿಗೂಢ ಸ್ಫೋಟವಾಗಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಧ್ಯಪ್ರದೇಶದ ಮೊರೆನಾ ನಗರದ ರಾಥೋಡ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಮೂರು ಮನೆಗಳು ಕುಸಿದಿವೆ. ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.