ಮೊರಾಕ್ಕೋ (Morocco Earhquake) ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 2,800ಕ್ಕೆ ಏರಿಕೆ ಕಂಡಿದ್ದು, ಭೂಕಂಪಕ್ಕೂ ಮುನ್ನ ನಿಗೂಢ ಬೆಳಕೊಂದು ಗೋಚರವಾಗಿದ್ದು, ಜನರು ಭಯ ಭೀತರಾಗಿದ್ದಾರೆ ಎಂದು ತಿಳಿದು ಬಂದಿದೆ.
ಶುಕ್ರವಾರ 6.8 ತೀವ್ರತೆಯ ಭೂಕಂಪ ಸಂಭವಿಸಿದ ಪರಿಣಾಮ ಅಪಾರ ಸಾವು-ನೋವು ಸಂಭವಿಸಿತ್ತು. ಬದುಕುಳಿದವರ ಪತ್ತೆಗಾಗಿ ದೇಶದಲ್ಲಿ ರಕ್ಷಣಾ ಕಾರ್ಯಾಚರಣೆಯ ಕಾರ್ಯ ಇನ್ನೂ ನಡೆಯುತ್ತಿದೆ. ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಕತಾರ್‌ನ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿವೆ.
ಭೂಕಂಪಕ್ಕೆ ಸಿಲುಕಿ 2,562 ಜನರು ಗಾಯಗೊಂಡಿದ್ದಾರೆ. ಮರ್ರಾಕೇಶ್‌ನಿಂದ 60 ಕಿ.ಮೀ. ದೂರದಲ್ಲಿರುವ ತಾಫೆಘಗ್ಟೆ ಎಂಬ ಪರ್ವತ ಹಳ್ಳಿ ಸಂಪೂರ್ಣವಾಗಿ ನಾಶವಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೊರಾಕ್ಕೋಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.