ಜನರಿಗೆ ಒಳ್ಳೇದಾಗಬೇಕು ಅಂದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರ್ಬೇಕು : ಸಿದ್ದರಾಮಯ್ಯ
ಮೈಸೂರು : ಜನರಿಗೆ ಒಳ್ಳೆಯದಾಗಬೇಕಾದರೆ ಈ ಸರ್ಕಾರ ತೊಲಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಅಚ್ಛೇ ದಿನ್ ಬರುತ್ತದೆ ಎಂದರೆ ಕೆಟ್ಟ ದಿನಗಳು ಮುಂದೆ ಕಾದಿವೆ ಎಂದು ಅರ್ಥ ಮಾಡಿಕೊಳ್ಳಬೇಕು.
ರಾಜ್ಯದಲ್ಲಿ ಅತ್ಯಂತ ಕೆಟ್ಟ ಸರ್ಕಾರ ಇದೆ. ಮುಖ್ಯಮಂತ್ರಿ ಮತ್ತು ಅವರ ಮಗ ಜೆಸಿಬಿಯಲ್ಲಿ ಹಣ ದೋಚುತ್ತಿದ್ದಾರೆ ಎಂದು ಆರೋಪಿಸಿದರು.
ಜನರಿಗೆ ಒಳ್ಳೆಯದಾಗಬೇಕಾದರೆ ಈ ಸರ್ಕಾರ ತೊಲಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಕಳೆದ ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮಾರಾಟದ ಮೇಲೆ ವಸೂಲಿ ಮಾಡಿರುವ ತೆರಿಗೆ ಒಂದು ಲಕ್ಷ ಇಪ್ಪತ್ತು ಸಾವಿರ ಕೋಟಿ. ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಕಡಿಮೆ ಮಾಡಿ ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡಬೇಕು. ಬಿಜೆಪಿ ಎಂದರೆ ತಿಗಣೆ ಇದ್ದಂತೆ. ಜನರ ರಕ್ತ ಹೀರುವುದು ಅವರ ಕೆಲಸ. ಆದರೆ ಕಾಂಗ್ರೆಸ್ ಜನರ ಕಣ್ಣೀರು ಒರೆಸುವ ಕೆಲಸ ಮಾಡುತ್ತದೆ ಎಂದರು.
ಇದೆ ವೇಳೆ ಪಕ್ಷ ಸೇರ್ಪಡೆ ವಿಚಾರವಾಗಿ ಮಾನತಾಡಿ, ಪದೇ ಪದೇ ಪಕ್ಷಕ್ಕೆ ದ್ರೋಹ ಮಾಡುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು. ಅಧಿಕಾರಕ್ಕಾಗಿ ಯಾರೂ ಪಕ್ಷಕ್ಕೆ ಬರಬಾರದು. ಜನಸೇವೆಯ ಗುರಿ ಇದ್ದವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಇದಕ್ಕು ಮುನ್ನಾ ಸಿದ್ದರಾಮಯ್ಯನವರು ಇಂದು ಕೆಪಿಸಿಸಿಯ ಮೈಸೂರು ನಗರ ಹಾಗೂ ಗ್ರಾಮಾಂತರ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆ, ಸಹಾಯ ಹಸ್ತ, ಸೈಕಲ್ ಜಾಥಾಗೆ ಚಾಲನೆ ನೀಡಿದರು.









