ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ Mysuru-Dasara saaksha tv
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರಕಿದೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಇಂದು ಬೆಳಗ್ಗೆ 8.26ರ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚಾನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಪತ್ನಿ ಚನ್ನಮ್ಮ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ನಾರಾಯಣ ಗೌಡ,
ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಶಾಸಕರಾದ ಜಿಟಿಡಿ, ರಾಮದಾಸ್, ನಾಗೇಂದ್ರ, ಬೆಲ್ಲದ್, ತನ್ವೀರ್ ಸೇಠ್, ಎಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ಡಾ.ಸುಧಾಕರ್, ಸಹಿತ ಹಲವರು ಉಪಸ್ಥಿತರಿದ್ದರು.
ಇನ್ನು ಸಂಜೆ ಆರು ಗಂಟೆಗೆ ಅರಮನೆ ಮುಂಭಾಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಇದೇ ವೇಳೆ ಸುಗಮ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಲಿದ್ದಾರೆ.