Mysuru Dasara 2022 | ಅರಮನೆ ನಗರಿಯಲ್ಲಿ ಜಂಬೂ ಸವಾರಿ ಸಂಭ್ರಮ
ಮೈಸೂರು : ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ.
ಅಂಬಾರಿಯನ್ನು ಹೊತ್ತು ರಾಜಮಾರ್ಗದಲ್ಲಿ ಸಾಗಲು ಗಜಪಡೆ ಸಿದ್ಧವಾಗಿದೆ.
ಮಧ್ಯಾಹ್ನ 2.36 ರಿಂದ 2.50ರ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿ ಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಲಿದ್ದಾರೆ.
ಜಂಬೂ ಸವಾರಿ ಮರೆವಣಿಗೆಗೆ ಚಾಲನೆ ನೀಡಲಿದ್ದಾರೆ.

ಸಂಜೆ 5.07ರಿಂದ 5.18ರವರೆಗೆ ಮಕರ ಲಗ್ನ ಮುಹೂರ್ತದಲ್ಲಿ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ ಮಾಡಲಿದ್ದಾರೆ.
ಜಂಬೂ ಸವಾರಿ ಮೆರವಣಿಗೆಯಲ್ಲಿ 750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿ ದೇವಿಯನ್ನ ಹೊತ್ತು ಆನೆ ಅಭಿಮನ್ಯು ಸಾಗಲಿದ್ದಾನೆ.
ಅರಮನೆ ಆವರಣದಿಂದ ಬನ್ನಿ ಮಂಟಪದವರೆಗೆ ಮೆರವಣಿಗೆ ನಡೆಯಲಿದೆ.
ಈ ಬಾರಿ ಜಾನಪದ ತಂಡ, ಸ್ತಬ್ದ ಚಿತ್ರಗಳು ಹೆಚ್ಚು ಇರಲಿವೆ.
ಹೀಗಾಗಿ ಜಂಬೂ ಸವಾರಿಯಲ್ಲಿ 9 ಆನೆಗಳು ಮಾತ್ರ ಭಾಗಿಯಾಗಲಿವೆ.