Mysuru : ಟ್ಯಾಕ್ಟರ್ ಪಲ್ಟಿ ಹೊಡೆದು ಮೂವರ ಸಾವು..
ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಚಿಟಗಯ್ಯನಕೊಪ್ಪಲು ಗ್ರಾಮದಲ್ಲಿ ಶನಿವಾರ ಸಂಜೆ ಸಂಭವಿಸಿದೆ.
ಪ್ರಕಾಶ್ (19), ಸಂತೋಷ್ (29) ಹಾಗೂ ಮರೀಜೋಗಿ(44) ಮೃತಪಟ್ಟ ದುರ್ಧೈವಿಗಳು. ಜೋಳ ಒಕ್ಕಣೆ ಯಂತ್ರ ಸಾಗಾಣಿಕೆ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ. ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿತ್ತು.
ಸ್ಥಳಕ್ಕೆ ಎಸ್ಪಿ ಆರ್.ಚೇತನ್, ಎಎಸ್ಪಿ ನಂದಿನಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಬಗ್ಗೆ ಟಿ ನರಸಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
Mysuru: Three killed in tractor overturn.