ಕನ್ನಡದ ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಪುಷ್ಪ 2’ (Pushpa 2) ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ಸಖತ್ ಬ್ಯೂಸಿಯಾಗಿದ್ದಾರೆ. ಚೆನ್ನೈನಲ್ಲಿ ನಡೆದ ‘ಪುಷ್ಪ 2’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಲವ್ ಲೈಫ್ ಬಗ್ಗೆ ನಟಿ ಪರೋಕ್ಷವಾಗಿ ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ರಶ್ಮಿಕಾ ಜೊತೆ ಅಲ್ಲು ಅರ್ಜುನ್ ಮತ್ತು ಶ್ರೀಲೀಲಾ (Sreeleela) ಕೂಡ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ರಶ್ಮಿಕಾಗೆ ಮದುವೆ ಬಗ್ಗೆ ಪ್ರಶ್ನಿಸಲಾಯಿತು. ಆಗ ನಾಚುತ್ತ ಮಾತನಾಡಿದ ಅವರು, ಅವರ ಬಗ್ಗೆ ನಿಮಗೆಲ್ಲ ಗೊತ್ತು ಎಂಬ ಸುಳಿವು ನೀಡಿದ್ದಾರೆ.
ಯಾರನ್ನು ಮದುವೆಯಾಗುತ್ತೀರಿ ಎಂದಾಗ ಅದು ಎಲ್ಲರಿಗೂ ತಿಳಿದಿರುವ ವಿಷಯ ಎಂದು ನಕ್ಕಿದ್ದಾರೆ. ನೇ ಖುದ್ದಾಗಿ ಒಂದು ದಿನ ಎಲ್ಲವನ್ನೂ ಹೇಳುತ್ತೇನೆ ಎಂದು ನಗುತ್ತಲೇ ರಶ್ಮಿಕಾ ಅಭಿಮಾನಿಗಳಿಗೆ ಹೇಳಿದ್ದಾರೆ.
ಇತ್ತೀಚೆಗೆ ವಿಜಯ್ ದೇವರಕೊಂಡ (Vijay Devarakonda) ಹಾಗೂ ರಶ್ಮಿಕಾ ಮಧ್ಯೆ ಗಾಸಿಪ್ ಗಳು ಕೇಳಿ ಬರುತ್ತಿದ್ದು, ಇದು ಸತ್ಯ ಇರಬಹುದು ಎಂದು ಅಭಿಮಾನಿಗಳು ಮಾತನಾಡುತ್ತಿದ್ದಾರೆ.








