ಶಾಂತಿ ಕದಡುವುದೇ #ನಾಡದ್ರೋಹಿಕಾಂಗ್ರೆಸ್ ಉದ್ದೇಶ : ಬಿಜೆಪಿ ಆರೋಪ
ಬೆಂಗಳೂರು : ಶಾಂತಿ ಕದಡುವುದೇ #ನಾಡದ್ರೋಹಿಕಾಂಗ್ರೆಸ್ ಉದ್ದೇಶ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. #nadadrohicongress
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು, ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ಶಾಂತಿ ಕದಡುವುದೇ #ನಾಡದ್ರೋಹಿಕಾಂಗ್ರೆಸ್ ಉದ್ದೇಶವಾಗಿದೆ.
ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು @INCKarnataka ಹವಣಿಸುತ್ತಿದೆ.
ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ "ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ" ಎಂದು @siddaramaiah ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ.#ನಾಡದ್ರೋಹಿಕಾಂಗ್ರೆಸ್
— BJP Karnataka (@BJP4Karnataka) December 19, 2021
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಹೋರಾಟಕ್ಕೆ ಜನ ಬೆಂಬಲ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸುತ್ತಿದ್ದೀರಾ? ಭಾಷೆ ಹಾಗೂ ಸ್ವಾತಂತ್ರ್ಯ ವೀರರಿಗೆ ಅಪಮಾನ ಮಾಡುವ ಷಡ್ಯಂತ್ರ ರೂಪುಗೊಂಡಿದ್ದು ಕಾಂಗ್ರೆಸ್ ವಾರ್ ರೂಮಿನಲ್ಲೇ ಎಂದು ಅನುಮಾನ ವ್ಯಕ್ತಪಡಿಸಿದೆ.
ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ “ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ” ಎಂದು ಸಿದ್ದರಾಮಯ್ಯ ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ ಎಂದು ಕುಟುಕಿದೆ ಬಿಜೆಪಿ.








