ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣಕ್ಕೆ ಡೇಟ್ ಫಿಕ್ಸ್ …
ಬೆಂಗಳೂರು: ದೇವನಹಳ್ಳಿಯ ಅಂತರಾಷ್ಟ್ರೀಯ ಕೆಂಪೇಗೌಡ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಣದ ಕಾರ್ಯ ಭರದಿಂದ ಸಾಗುತ್ತಿದೆ.
ನವೆಂಬರ ಅಥವಾ ಡಿಸೆಂಬರ್ ತಿಂಗಳಲ್ಲಿ ಸ್ಟ್ಯಾಚು ಆಫ್ ಪ್ರಾಸ್ಪರಿಟಿ (ಪ್ರಗತಿಯ ಪ್ರತಿಮೆ) ಅನಾವರಣಗೊಳ್ಳುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದಿನಿಂದ 45 ದಿನಗಳ ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 20 ಕೋಟಿ ರೂ ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಗೊಳ್ಳುತ್ತಿದೆ.
ಅಂತರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವಾಗಿಸಲು ರಾಜ್ಯಸರ್ಕಾರ ಯೋಜನೆ ರೂಪಿಸಿದೆ. ಅಮೆರಿಕಾದ ಸ್ವಾತಂತ್ರ್ಯ ಪ್ರತಿಮೆ ಮತ್ತು ಗುಜರಾತಿನ ಏಕತಾ ಪ್ರತಿಮೆಯ ಸಾಲಿಗೆ ಸ್ಯಾಚು ಆಫ್ ಪ್ರಾಸ್ಪರಿಟಿ ( ಪ್ರಗತಿಯ ಪ್ರತಿಮೆ) ಸೇರಲಿದೆ.
ರಾಜ್ಯದ 31 ಜಿಲ್ಲೆಗಳಲ್ಲಿ ಕೆಂಪೇಗೌಡ ಸಾಧನೆ ತಿಳಿಸುವುದಕ್ಕಾಗಿ ಇಂದಿನಿಂದ 45 ದಿನಗಳ ಅಭಿಯಾನಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.
Nadaprabhu kempegowda: 108 feet tall statue of Nadaprabhu Kempegowda unveiled in December…