ನಾಡೋಜ ಡಾ. ಚನ್ನವೀರ ಕಣವಿ ನಿಧನ | ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಸಂತಾಪ Saaksha Tv
ಬೆಂಗಳೂರು: ನಾಡೋಜ ಡಾ. ಚನ್ನವೀರ ಕಣವಿ ಅವರು ಇಂದು ಇಹಲೋಕ ತ್ಯಜಿಸಿದ್ದು, ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ನಾಡಕಂಡ ಕಂಡ ಅತ್ಯಂತ ಸೃಜನ ಶೀಲ ಸಾಹಿತ್ಯ ರಚನೆ ಮಾಡಿದ್ದಾರೆ. ಸಜ್ಜನಿಕೆಯ ಸಾಕಾರ ಮೂರ್ತಿ, ಅವರ ಮಾತುಗಳು ,ಮೃದು ಮತ್ತು ಮನಸ್ಸಿಗೆ ಮುಟ್ಟುವಂತಹ ಮಾತುಗಳು. ಅವರದು ಅಪರೂಪದ ವ್ಯಕ್ತಿತ್ವ. ಎಲ್ಲ ಸಮಸ್ಯೆಗಳಿಗೆ ಪರಿಹಾರ ಸೂಚಿಸುವಂತಹ ಸಾಹಿತ್ಯ ರಚನೆ ಮಾಡಿದ್ದರು. ಸಾಹಿತ್ಯ ಮುಖಾಂತರ ಕಲ್ಪನೆ ಮತ್ತು ವಾಸ್ತವಾಂಶವನ್ನು ಬಿಂಬಿಸಿದವರು. ಹಲವಾರು ಪ್ರಶಸ್ತಿಗೆ ಭಾಜನರಾಗಿದ್ದು, ಪ್ರಶಸ್ತಿಗೆ ಗೌರವ ಬರುವ ರೀತಿಯಲ್ಲಿ ಅವರ ವ್ಯಕ್ತಿತ್ವವಿತ್ತು. ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ದುಃಖ ತಡೆದುಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಸಂತಾಪ ಸೂಚಿಸಿದ್ದು, ಕನ್ನಡ ಕಾವ್ಯಲೋಕದ ಚೆಂಬೆಳಕಾಗಿದ್ದ, ಸೌಹಾರ್ದತೆಯನ್ನು ಸಾರುತ್ತಾ ಸಮನ್ವಯ ಕವಿ ಎಂದೇ ಖ್ಯಾತರಾಗಿದ್ದ ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖಕ್ಕೀಡಾಗಿದ್ದೇನೆ. ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಕನ್ನಡದ ಖ್ಯಾತ ವಿದ್ವಾಂಸ, ಕವಿ ಶ್ರೀ ಚನ್ನವೀರ ಕಣವಿ ಅವರು ನಿಧನರಾಗಿರುವುದು ಸಾಹಿತ್ಯ, ಸಾಂಸ್ಕೃತಿಕ ವಲಯಕ್ಕಾದ ದೊಡ್ಡ ನಷ್ಟ. ಹೊಸಗನ್ನಡ ಸಾಹಿತ್ಯದ ಪ್ರಮುಖ ಕವಿ ಎಂದೇ ಅವರು ಜನಪ್ರಿಯರಾಗಿದ್ದರು. ಮೃತರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬ ಸದಸ್ಯರು, ಓದುಗ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ.









