ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆಯ ಕುಟುಂಬಸ್ಥರು ನೋವಿನಲ್ಲಿಯೂ ಕಣ್ಣು ದಾನ ಮಾಡಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದ ಪ್ರೇಮಾ ಅವರ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿದ ನಂತರ ಪ್ರೇಮಾ ಅವರ ಪಾರ್ಥಿವ ಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಟನೆಯಲ್ಲಿ ತಾಯಿಯನ್ನು ಕಳೆದುಕೊಂಡಿದ್ದ ಮಕ್ಕಳನ್ನು ಕಣ್ಣೀರಾಗಿದ್ದರು. ಅಲ್ಲದೇ, ಅಪಘಾತ ಮಾಡಿರುವ ನಾಗಭೂಷಣ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸದ್ಯ ನಾಗಭೂಷಣ್ ವಿರುದ್ಧ ಐಪಿಸಿ 279, 337 ಹಾಗೂ 304ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ನೋವಿನಲ್ಲೂ ಕಣ್ಣುಗಳನ್ನು ದಾನ ಮಾಡಿದ್ದಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.