ಮಂಡ್ಯ: ನಾಗಮಂಗಲ ಕೋಮುಗಲಭೆ ಪ್ರಕರಣಕ್ಕೆ (Nagamangala Communal Violence) ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಎಲ್ಲ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.
ಮಂಡ್ಯದ (Mandya) ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು (Bail) ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಂಧನದಲ್ಲಿದ್ದ (Judicial Custody) ಎರಡೂ ಕೋಮಿನ 55 ಆರೋಪಿಗಳಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ಆರೋಪಿಗಳಿಗೆ ತಲಾ ಒಂದು ಲಕ್ಷ ರೂ. ಮೌಲ್ಯದ ಬಾಂಡ್, ಪ್ರತಿ ಭಾನುವಾರ ಠಾಣೆಗೆ ತೆರಳಿ ಸಹಿ ಹಾಕಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಅಪರಾಧಿ ಕೃತ್ಯದಲ್ಲಿ ಭಾಗಿಯಾಗದಂತೆ ಕೋರ್ಟ್ ಷರತ್ತು ವಿಧಿಸಿ, ಜಾಮೀನು ಮಂಜೂರು ಮಾಡಿದೆ. ಆದರೆ, ಆರೋಪಿಗಳು ಸೋಮವಾರ ಬಿಡುಗಡೆಯಾಗುವ ಸಾಧ್ಯತೆ ಇದೆ. ಕೋಮುಗಲಭೆಗೆ ಸಂಬಂಧಿಸಿದಂತೆ ಸೆ. 11ರಂದು ಆರೋಪಿಗಳನ್ನು ಬಂಧಿಸಲಾಗಿತ್ತು.