ಮಂಡ್ಯ: ನಾಗಮಂಗಲ ಗಲಭೆ ಪ್ರಕರಣ (Nagamangala Violence)ಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ಮಧ್ಯೆ ದೊಡ್ಡ ಫೈಟ್ ನಡೆದಿದ್ದು, ಈಗ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H D Kumarswamy) ಭೇಟಿ ನೀಡಲಿದ್ದು, ನೊಂದ ಕುಟುಂಬಗಳಿಗೆ ಧನ ಸಹಾಯ ಮಾಡಲು ಮುಂದಾಗಿದ್ದಾರೆ.
ನಾಗಮಂಗಲದಲ್ಲಿ (Nagamangala) ನಡೆದ ಗಲಭೆಯಿಂದಾಗಿ ಹಲವು ಬದುಕು ಬೀದಿಗೆ ಬಂದಿದೆ. ಈ ಕುರಿತು ಸಚಿವ ಚೆಲುವರಾಯಸ್ವಾಮಿ (Cheluvarayaswamy) ಹಾನಿಗೊಳಗಾದವರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಘೋಷಿಸಿದ್ದರು. ಅದೇ ರೀತಿ ಈಗ ಧನ ಸಹಾಯ ಮಾಡಲು ಮುಂದಾಗಿದ್ದಾರೆ.
ಗಲಭೆಯಿಂದಾಗಿ ಹಲವು ಅಂಗಡಿಗಳು ಸುಟ್ಟು ಕರಕಲಾಗಿದ್ದು, ಹಲವರ ಬದುಕು ಬೀದಿಗೆ ಬಂದಿದೆ. ಹೀಗಾಗಿ ಸಚಿವ ಚಲುವರಾಯಸ್ವಾಮಿ ಗಲಭೆಯಾದ ಮಾರನೇ ದಿನವೇ ಹಾನಿಗೆ ಒಳಗಾದವರಿಗೆ ಸರ್ಕಾರದಿಂದ ಪರಿಹಾರ ನೀಡುವುದರ ಜೊತೆ ವೈಯಕ್ತಿಕವಾಗಿಯೂ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಇಂದು ಸಂಜೆ ನಾಗಮಂಗಲದ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ಮಾಡಲಿರುವ ಕುಮಾರಸ್ವಾಮಿ, ಜೈಲು ಸೇರಿರುವವರ ಹಾಗೂ ಪೊಲೀಸರಿಗೆ ಹೆದರಿ ಊರು ಬಿಟ್ಟಿರುವವರ ಕುಟುಂಬಸ್ಥರನ್ನು ಭೇಟಿ ಮಾಡಲಿದ್ದಾರೆ. ಅಲ್ಲದೇ, ನಂತರ ಆರ್ಥಿಕ ಸಹಾಯ ಮಾಡಲಿದ್ದಾರೆ.