ಮಂಡ್ಯ: ನಾಗಮಂಗಲ (Nagamangala Violence) ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆದಂಡವಾಗಿದ್ದು, ಓರ್ವ ಅಧಿಕಾರಿ ಸಸ್ಪೆಂಡ್ ಮಾಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿ, ನಾಗಮಂಗಲ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ (Ashok Kumar) ರನ್ನು ಅಮಾನತು (Suspend) ಮಾಡಲಾಗಿದೆ.
ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್ ಪೆಕ್ಟರ್ ರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದು ನಾಗಮಂಗಲ ಪಟ್ಟಣ ಹೊತ್ತಿ ಉರಿದಿತ್ತು. ಕರ್ತವ್ಯ ಲೋಪ, ನಿರ್ಲಕ್ಷತನ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ.