ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ (Nagamangala) ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿಯ ಮಧ್ಯೆ ವಾಕ್ಸಮರ ನಡೆಯುತ್ತಿದೆ. ಕಾಂಗ್ರೆಸ್ ವಿರುದ್ಧ ವಿಪಕ್ಷಗಳು ಬೀಳುತ್ತಿವೆ. ಈ ಮಧ್ಯೆ ಗಲಭೆ ಪ್ರಕರಣ ಸಂಬಂಧ ಬಿಜೆಪಿಯಿಂದ ಸತ್ಯಶೋಧನ ಸಮಿತಿ ರಚಿಸಲಾಗಿದೆ.
ಕೋಮುಗಲಭೆಗೆ ಸಂಬಂಧಿಸಿದಂತೆ ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ (B Y Vijayendra) 5 ಜನರು ತಂಡವನ್ನು ರಚಿಸಿದ್ದು, ಒಂದು ವಾರದ ಒಳಗೆ ವರದಿ ನೀಡುವಂತೆ ಸಮಿತಿಗೆ ಸೂಚಿಸಿದ್ದಾರೆ.
ಈ ಸಮಿತಿಯೂ ಒಂದು ವಾರದಲ್ಲಿ ಘಟನೆಗೆ ಕಾರಣ ಏನು ಎಂಬುದು ಸೇರಿದಂತೆ ಸಂಪೂರ್ಣ ಮಾಹಿತಿ ಕಲೆ ಹಾಕಿ ರಾಜ್ಯಾಧ್ಯಕ್ಷರಿಗೆ ನೀಡಲಿದೆ. ಈ ಸಮಿತಿಯಲ್ಲಿ ಮಾಜಿ ಡಿಸಿಎಂ ಅಶ್ವಥ್ ನಾರಾಯಣ, ಶಾಸಕ ಭೈರತಿ ಬಸವರಾಜ್, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ, ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಇದ್ದಾರೆ. ನಾಗಮಂಗಲ ಕೋಮುಗಲಭೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಈ ಸಮಿತಿ ರಚನೆ ಮಾಡಿದೆ. ಮುಂದಿನ ದಿನಗಳಲ್ಲಿ ಈ ಸಮಿತಿಯ ನಿರ್ಧಾರದ ಮೇಲೆ ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ.