ಬೆಂಗಳೂರು: ಮಂಡ್ಯದ ನಾಗಮಂಗಲ ಗಲಭೆ ಪ್ರಕರಣದ ಬೆನ್ನಲ್ಲಿಯೇ ಸರ್ಕಾರ ಪರಿಸ್ಥಿತಿ ತಿಳಿಗೊಳಿಸುವ ಕೆಲಸ ಮಾಡುತ್ತಿದೆ. ಘಟನೆ ನಡೆದ ಬೆನ್ನಲ್ಲಿಯೇ ಗುಪ್ತಚರ ವಿಭಾಗದ ಎಡಿಜಿಪಿ ಶರತ್ ಚಂದ್ರ (Sharath Chandra) ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಇದನ್ನು ಗಮನಿಸಿದರೆ, ಗಲಭೆ ಕೇಸ್‌ಗೆ ಇದು ತಲೆದಂಡವೇ ಎಂಬ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ. ಅಲ್ಲದೇ, ಶರತ್ ಚಂದ್ರ ಅವರನ್ನು ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾಯಿಸಲಾಗಿದೆ. ಗುಪ್ತಚರ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ನಿಯೋಜಿಸಲಾಗಿದೆ.
ಅಲ್ಲದೇ, ಜೊತೆಗೆ ವಾರ್ತಾ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯನ್ನೂ ವಹಿಸಲಾಗಿದೆ. ಆದರೆ, ಸರ್ಕಾರದ ಈ ನಿರ್ಧಾರಕ್ಕೂ ವಿಪಕ್ಷಗಳು ಸುಮ್ಮನಾಗುತ್ತಿಲ್ಲ. ಸರ್ಕಾರದ ವಿರುದ್ಧ ಮುಗಿ ಬಿದ್ದಿವೆ.