ದಾವಣಗೆರೆ: ರಾಜ್ಯದ ಇಂದಿರಾ ಗಾಂಧಿ ಎಂದೇ ಖ್ಯಾತರಾಗಿದ್ದ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ಇಹಲೋಕ ತ್ಯಜಿಸಿದ್ದಾರೆ.
ಕರ್ನಾಟಕದ ಇಂದಿರಾ ಗಾಂಧಿ ಎಂದೇ ಖ್ಯಾತರಾಗಿದ್ದ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ (90) ಪಿ.ಜೆ.ಬಡಾವಣೆಯಲ್ಲಿರುವ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಇವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನ 3 ರವರೆಗೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ದಾವಣಗೆರೆಯ ಪಿ.ಬಿ.ರಸ್ತೆಯ ವೈಕುಂಠಧಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದು ಬಂದಿದೆ.
ನಾಗಮ್ಮ 1972, 1978, 1989ರಲ್ಲಿ ಕಾಂಗ್ರೆಸ್ ಶಾಸಕಿಯಾಗಿ ಆಯ್ಕೆಯಾಗಿದ್ದರು. ಗುಂಡೂರಾವ್, ಬಂಗಾರಪ್ಪ, ಮೊಯ್ಲಿ ಸಂಪುಟದಲ್ಲಿ ಸಚಿವೆ ಆಗಿ ಸೇವೆ ಸಲ್ಲಿಸಿದ್ದಾರೆ. ಬೃಹತ್ ಕೈಗಾರಿಕೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ವಿಧಾನಸಭೆಯ ಉಪಸಭಾಪತಿಯಾಗಿ ಸೇವೆ ಸಲ್ಲಿದ್ದಾರೆ.