ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಯ ಬೆತ್ತಲೆ ಮೆರವಣಿಗೆ
ಹಾವೇರಿ: ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ವ್ಯಕ್ತಿಯನ್ನು ಊರಲ್ಲಿ ಬೆತ್ತಲೆ ಮೆರವಣಿಗೆ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
16 ವರ್ಷದ ಬಾಲಕಿ ಮೇಲೆ ಆರೋಪಿಗ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದನು. ಆರೋಪಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಹೊಡೆದು, ಹಗ್ಗ ಕಟ್ಟಿ ಊರಲ್ಲಿ ಬೆತ್ತಲೆ ಮೆರವಣಿಗೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿ ತಂದೆಯಿಂದ ಹನ್ನೊಂದು ಜನರ ಮೇಲೆ ಪ್ರತಿದೂರು ದಾಖಲು ಮಾಡಲಾಗಿದೆ.
ಇನ್ನೂ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಪೊಲೀಸರು ಜೈಲಿಗೆ ಕಳಿಸಿದ್ದಾರೆ.
ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ಏಪ್ರಿಲ್ 21ರಂದು ನಡೆದ ಘಟನೆಯ ವೀಡಿಯೋ ವೈರಲ್ ಆಗಿದೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.