Nalapad controversial statement | ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ : ನಲಪಾಡ್ ವಿವಾದ
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನತ್ತ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣವನ್ನು ಖಂಡಿಸುವ ಭರದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿರುವ ನಲಪಾಡ್, ಬಿಜೆಪಿಯವರು ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಇದು ಖಂಡನೀಯ.

ಮೊಟ್ಟೆ ಎಸೆದ ಕೂಡಲೇ ನಾವು ಹೆದರುತ್ತೇವೆ ಅಂದುಕೊಂಡ್ರಾ ? ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ. ಕಾಂಗ್ರೆಸ್ ಪಕ್ಷದವರು. ಗಾಂಧಿ ತತ್ವದಲ್ಲಿ ನಂಬಿಕೆ ಇಟ್ಟವರು.
ನಾಳೆಯಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಬಿಜೆಪಿ ಸಚಿವರ ಮನೆಗಳಿಗೆ ಮೊಟ್ಟೆ ಕಳುಹಿಸಿಕೊಡುವ ಮೂಲಕ ಪ್ರತಿಭಟನೆ ಮಾಡಲಿದ್ದೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.








