ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಾಗಿನಿಂದ ಪಕ್ಷದಲ್ಲಿನ ಆಂತರಿಕ ಸಮಸ್ಯೆ ಉದ್ಭವವಾಗುತ್ತಿದೆ. ಈಗ ರೇಣುಕಾಚಾರ್ಯ ಅವರು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ರಾಜೀನಾಮೆ ನೀಡಬೇಕು ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿ ಮಾಡಲು ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು ಎಂದು ಬರೆದುಕೊಂಡಿದ್ದಾರೆ.
ಬಿಜೆಪಿ (BJP) ರಾಜ್ಯದ ಅಧ್ಯಕ್ಷರಿಗೆ ವಿನಂತಿ ಮಾಡುತ್ತೇನೆ ನಿಮ್ಮ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು ಎಂದು ಖಾರವಾಗಿ ಬರೆದಿದ್ದಾರೆ..
ಪಕ್ಷವನ್ನು ಹಗಲು ರಾತ್ರಿ ಕಟ್ಟಿದ ಹಿರಿಯರಾದ ಯಡಿಯೂರಪ್ಪ, ದಿವಂಗತ ಅನಂತ ಕುಮಾರ್, ಜಗದೀಶ್ ಶೆಟ್ಟರ್, ಈಶ್ವರಪ್ಪ ನವರದ್ದು ಬಹುದೊಡ್ಡ ಪಾತ್ರವಿದೆ. ಅಂಥವರನ್ನು ಚುನಾವಣಾ ಸಮಯದಲ್ಲಿ ಕಡೆಗಣಿಸಿದ್ದು. ಬಿಜೆಪಿಗೆ ನಷ್ಟವಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.






