ಬೆಂಗಳೂರು: ದೆಹಲಿಯ ಐತಿಹಾಸಕ ಕೆಂಪುಕೋಟೆಯಲ್ಲಿ ಗೂಂಡಾಗಿರಿ ಪ್ರದರ್ಶನ ಮಾಡಿ, ಪೊಲೀಸರ ಮೇಲೆ ಹಲ್ಲೆ ನಡೆಸಿ ದೇಶವಿರೋಧಿ ಶಕ್ತಿಗಳಾದ ಖಲಿಸ್ತಾನ್ ಧ್ವಜವನ್ನು ಹಾರಿಸಿರುವುದು ಅಕ್ಷಮ್ಯ ಅಪರಾಧ. ಬಿಜೆಪಿ ಈ ಗೂಂಡಾಗಿರಿ ಪ್ರವೃತ್ತಿಯನ್ನು ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ತಿಳಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ರೈತರ ಹೆಸರಲ್ಲಿ ವ್ಯವಸ್ಥೆಯ ಮೇಲೆ ಮಾಡಿರುವ ಹಲ್ಲೆಯನ್ನು, ಪೊಲೀಸರ ಮೇಲೆ ನಡೆಸಿರುವ ದೌರ್ಜನ್ಯವನ್ನು ಹಾಗೂ ಸಂವಿಧಾನವನ್ನು ಧಿಕ್ಕರಿಸುವ ದೇಶವಿರೋಧಿ ವರ್ತನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಕಟೀಲ್ ಹೇಳಿದ್ದಾರೆ.
ಜನವರಿ 26 ನಮ್ಮೆಲ್ಲ ದೇಶವಾಸಿಗಳಿಗೆ ಅತ್ಯಂತ ಪವಿತ್ರವಾದ ದಿನ. ನಾವೆಲ್ಲರೂ ಒಪ್ಪಿಕೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಯ ಬುನಾದಿಯಾಗಿರುವ ಪವಿತ್ರವಾದ ಸಂವಿಧಾನವನ್ನು ಅಳವಡಿಸಿಕೊಂಡಿರುವ ದಿನ. ಇದೊಂದು ರಾಷ್ಟ್ರೀಯ ಉತ್ಸವ. ನಾವೆಲ್ಲರೂ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅತ್ಯಂತ ಸಂಭ್ರಮದಿಂದ ಭಾಗವಹಿಸಿ, ಸಂವಿಧಾನವನ್ನು ಗೌರವಿಸಿ ನಮ್ಮ ಬದ್ಧತೆಯನ್ನು ಮತ್ತೊಮ್ಮೆ ಪ್ರದರ್ಶಿಸಬೇಕಾದ ದಿನ. ಈ ಪವಿತ್ರ ದಿನದಂದು ಪ್ರಜಾಪ್ರಭುತ್ವವನ್ನು ಧಿಕ್ಕರಿಸಿ ಸಂವಿಧಾನದ ಆಶಯವನ್ನು ಅಗೌರವಿಸಿ ಪ್ರತಿವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜವನ್ನು ಗೌರವಿಸುವ ಪವಿತ್ರ ನೆಲೆಯಾದ ಕೆಂಪುಕೋಟೆ ಮೇಲೆ ದಾಳಿ ಮಾಡಲಾಗಿದೆ.
ರೈತರ ಹೆಸರಿನಲ್ಲಿ ರೈತರ ಪರವಾಗಿರುವ ಮಸೂದೆಗಳನ್ನು ಪ್ರತಿಭಟಿಸುತ್ತಿರುವ ನೆಪದಲ್ಲಿ ಒಂಬತ್ತು ಸುತ್ತಿನ ಮಾತುಕತೆಯ ನಂತರವೂ ತಮ್ಮ ಪಟ್ಟನ್ನು ಬಿಡದೆ ರಾಷ್ಟ್ರವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸಿ ಕಾಂಗ್ರೆಸ್ ಪಕ್ಷ, ಕಮ್ಯೂನಿಸ್ಟ್ ಪಕ್ಷ, ರೈತ ವಿರೋಧಿ ದಲ್ಲಾಳಿಗಳು, ಖಲಿಸ್ತಾನ್ ಮತ್ತು ಟುಕಡೇ ಟುಕಡೇ ಗ್ಯಾಂಗ್ ನಂಥ ರಾಷ್ಟ್ರವಿರೋಧಿ ಶಕ್ತಿಗಳು ಸಂಘಟಿತರಾಗಿ ನಡೆಸುತ್ತಿರುವ ಹೋರಾಟ ಅತ್ಯಂತ ಖಂಡನೀಯ ಮತ್ತು ಅನವಶ್ಯಕ ಎಂದು ತಿಳಿಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಬಿಜೆಪಿ ಯಾವತ್ತೂ ರೈತರ ಪರವಾಗಿದ್ದು, ರೈತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಮತ್ತು ರೈತರನ್ನು ದಲ್ಲಾಳಿಗಳ ಕಪಿಮುಷ್ಟಿಯಿಂದ ಬಿಡುಗಡೆಗೊಳಿಸಿ ರೈತರಿಗೆ ನ್ಯಾಯ ಒದಗಿಸಲಿದೆ. ಈ ವಿಚಾರದಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡು ಈ ಮಸೂದೆಗಳನ್ನು ತಂದಿರುವುದನ್ನು ದೇಶ ಒಪ್ಪಿಕೊಂಡಿದೆ ಎಂದಿರುವ ಕಟೀಲ್, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮುಂದಾಗಿದ್ದ ಪೊಲೀಸರು ಅತ್ಯಂತ ಸಂಯಮದಿಂದ ವರ್ತಿಸಿದ್ದು, ಪೊಲೀಸರು ಮತ್ತು ಮಾಧ್ಯಮ ಪ್ರತಿನಿಧಿಗಳ ಮೇಲೆ ಕಲ್ಲೆಸೆತ, ಮಾರಕಾಯುಧ ಪ್ರಯೋಗ ಮಾಡಿರುವುದು ಹಾಗೂ ಕಬ್ಬಿಣದ ಸರಳಿನಿಂದ ಹಲ್ಲೆ ಮಾಡಿರುವುದು ಗೂಂಡಾ ಪ್ರವೃತ್ತಿಗೆ ಸ್ಪಷ್ಟ ಉದಾಹರಣೆಯಾಗಿದೆ ಎಂದೂ ಆರೋಪಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel