ಮಂಗಳೂರಿನಲ್ಲಿ ಉಗ್ರ ಸಂಘಟನೆ ಬೆಂಬಲಿಸಿ ಬರಹ : ಕಟೀಲ್ ಹೇಳಿದ್ದೇನು..?
ಉಡುಪಿ : ದೇಶ ವಿರೋಧಿ ಘೋಷಣೆ ಯಾರೇ ಹಾಕಿದರೂ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅದನ್ನು ನಮ್ಮ ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಮಂಗಳೂರಿನಲ್ಲಿ ಉಗ್ರ ಸಂಘಟನೆಯನ್ನು ಬೆಂಬಲಿಸುವ ಗೋಡೆ ಬರಹ ವಿಚಾರಕ್ಕೆ ಬಿಜೆಪಿ ರಾಜ್ಯಾಧಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಲವ್ ಜಿಹಾದ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಟೀಲ್, ದೇಶದ ವಿವಿಧ ರಾಜ್ಯಗಳಲ್ಲಿ ಲವ್ ಜಿಹಾದ್ ಸುದ್ದಿಯಾಗುತ್ತಿದೆ. ದೆಹಲಿ ಒತ್ತಡ ಇಲ್ಲ, ಲಿಂಗಾಯತರು ಒಬಿಸಿಗೆ ಸೇರೋದು ಅಪರಾಧವೇ: ಸಚಿವ ಮಾಧುಸ್ವಾಮಿ ಪ್ರಶ್ನೆ..!
ಈ ವಿಚಾರವಾಗಿ ಕಠಿಣ ಕ್ರಮ ತೆಗೆದುಕೊಳ್ಳಲು ಪಾರ್ಟಿ, ಕೋರ್ಟ್ ಕಮಿಟಿಯಲ್ಲಿ ತೀರ್ಮಾನ ತೆಗೆದುಕೊಂಡಿದ್ದೇವೆ, ಸಿಎಂ ಒಪ್ಪಿಗೆ ನೀಡಿದ್ದಾರೆ. ಕರ್ನಾಟಕದಲ್ಲಿ ಲವ್ ಜಿಹಾದ್ ಬಗ್ಗೆ ಕಠಿಣ ಕ್ರಮವನ್ನು ಸರ್ಕಾರ ತೆಗೆದುಕೊಳ್ಳುತ್ತೆ ಎಂದು ತಿಳಿಸಿದರು.
ಇದೇ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿ, ಅದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರದ ನಾಯಕರ ಜೊತೆಗೆ ಚರ್ಚಿಸಿ ಸಿಎಂ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ದೆಹಲಿಗೆ ಕೇಂದ್ರದ ಅನುದಾನ ತರುವುದಕ್ಕೆ ಮಂತ್ರಿಗಳು ಹೋಗುತ್ತಾರೆ. ದೆಹಲಿ ಹೋದಾಗ ಕೇಂದ್ರ ನಾಯಕರನ್ನು ಭೇಟಿ ಆಗುವುದು ಸಹಜ ಎಂದು ರಮೇಶ್ ಜಾರಕಿಹೊಳಿ ದೆಹಲಿ ಪ್ರವಾಸದ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಮಸ್ಕಿ, ಬಸವಕಲ್ಯಾಣ ಉಪಚುನಾವಣೆ ಬಗ್ಗೆ ಮಾತನಾಡಿ, ನಾವು ಎರಡೂ ಕ್ಷೇತ್ರಗಳಲ್ಲೂ ಪ್ರವಾಸ ಮಾಡಿದ್ದೇನೆ. ನಿಶ್ಚಿತವಾಗಿ ಎರಡೂ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel