Nalin Kumar Kateel

ಸದ್ಯ ಬಿಜೆಪಿಯಲ್ಲಿ ಸಿಎಂ ಚರ್ಚೆಯ ಬಗ್ಗೆ ಸಾಕಷ್ಟು ವಿವಾದಗಳು ಎದ್ದಿವೆ. ಆರೋಪ ಪ್ರತ್ಯಾರೋಪ, ಪ್ರತಿರೋಧಗಳು ಭುಗಿಲೆದ್ದಿರುವ ಬೆನ್ನಲ್ಲೇ ಎಲ್ಲಾ ವಿವಾದಗಳ ಕಿಚ್ಚಿಗೆ ನಳಿನ್ ಕುಮಾರ್ ಕಟೀಲ್ ಅವರು ತಣ್ಣೀರು ಎರಚಿದ್ಧಾರೆ. ಯಡಿಯೂರಪ್ಪ ಹೆಚ್ಚು ದಿನಗಳ ಕಾಲ ಅಧಿಕಾರದಲ್ಲಿ ಉಳಿಯೋದಿಲ್ಲ ಎಂಬ ಯತ್ನಾಳ್ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿರೋ ಬೆನ್ನಲ್ಲೇ ಸಿಎಂ ಬದಲಾವಣೆ ಇಲ್ಲ. 2023ರವರೆಗೂ ಯಡಿಯೂರಪ್ಪನವರೇ ಸಿಎಂ ಎಂದು ಸ್ಪಷ್ಟಪಡಿಸಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್.
ಮೈತ್ರಿ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ : ನಳೀನ್ ಕುಮಾರ್ ಕಟೀಲ್

ಹೌದು 2023ರ ವರೆಗೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಎಲ್ಲ ವಿವಾದಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ಕಟೀಲು ತೆರೆ ಎಳೆದಿದ್ದಾರೆ. 2023ರ ಸಾರ್ವತ್ರಿಕ ಚುನಾವಣೆಯವರೆಗೂ ಬಿಜೆಪಿ ಸರಕಾರಕ್ಕೆ ಏನೂ ಆಗುವುದಿಲ್ಲ. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ, ಬಿಜೆಪಿಯಲ್ಲಿ ಯಡಿಯೂರಪ್ಪ ಅವರೇ ಅಂತಿಮ ಎಂದೂ ನಳಿನ್ಕುಮಾರ್ಕಟೀಲು ಸ್ಪಷ್ಟವಾಗಿ ಹೇಳಿದ್ದಾರೆ.
ಕೋವಿಡ್ ಸೋಂಕು ನಿಯಂತ್ರಣದಲ್ಲಿ ಪೊಲೀಸರ ಶ್ರಮ ಶ್ಲಾಘನೀಯ : ಬಿಎಸ್ ವೈ
ಇನ್ನೂ ಯತ್ನಾಳ್ ಅವರ ಹೇಳಿಕೆಗೆ ಸಿಎಂ ರಾಜಕೀಯ ಕಾರ್ಯದರ್ಶಿ, ಸಚಿವ ಆರ್ ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಬೊಮ್ಮಾಯಿ ಸೇರಿದಂತೆ ಹಲವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಇದೀಗ ಕಟೀಲ್ ಸಹ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ ಎಂದು ವಿವಾದಗಳಿಗೆ ತೆರೆ ಎಳೆದಿದ್ದಾರೆ..
Nalin Kumar Kateel
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel