ತಾಲಿಬಾನ್ ವಿಚಾರದಲ್ಲಿ ಕಾಂಗ್ರೆಸ್ ಮೌನವೇಕೆ : ಕಟೀಲ್
ಕಲಬುರಗಿ : ತಾಲಿಬಾನ್ ವಿಚಾರದಲ್ಲಿ ಕಾಂಗ್ರೆಸ್ ಮೌನವೇಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೊಮ್ಮಾಯಿ ನೇತೃತ್ವದ ಸರ್ಕಾರ ಅವಧಿ ಪೂರ್ಣ ಮಾಡಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.
ಸಿದ್ದರಾಮಯ್ಯನವರು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಇರೋದು ಕನ್ಫರ್ಮ್ ಆಗಿದೆ. ಹಾಗಾಗಿ ಸಿದ್ದರಾಮಯ್ಯ ಜೋತಿಷ್ಯ ಹೇಳೋದಕ್ಕೆ ಮುಂದಾಗಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.
ಮುಂದುವರೆದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ತಾಲಿಬಾನ್ ವಿಚಾರದಲ್ಲಿ ಕಾಂಗ್ರೆಸ್ ಮೌನವೇಕೆ ಎಂದು ಪ್ರಶ್ನಿಸಿದರು.
ಜೊತೆಗೆ ಎಲ್ಲ ಜನಪರ ವಿಷಯಕ್ಕೆ ಟಿಕಿಸೋ ಕಾಂಗ್ರೆಸ್ ಈಗ ಮೌನವಾಗಿದೆ. ಸಿಎಎ ವಿಚಾರದಲ್ಲಿ ಕಾಂಗ್ರೆಸ್ ಬೆಂಕಿ ಹಚ್ಚಿದ್ದು ಎಲ್ಲರಿಗೂ ಗೊತ್ತಿದೆ. ಭಾರತೀಯ ಜನತಾ ಪಕ್ಷ ಎಲ್ಲ ರನ್ನ ಒಗ್ಗಟ್ಟಾಗಿ ತೆಗೆದುಕೊಂಡು ಹೋಗುತ್ತೆ ಎಂದು ಹೇಳಿದರು.
ಅಲ್ಲದೆ ಸೆಪ್ಟಂಬರ್ 3ರಂದು ನಡೆಯಲಿರುವ ಕಲಬುರಗಿ, ಬೆಳಗಾವಿ, ಹುಬ್ಬಳಿ-ಧಾರವಾಡ ಈ ಮೂರು ಮಹಾನಗರ ಪಾಲಿಕೆಗಳು ಬಿಜೆಪಿ ತೆಕ್ಕೆಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.









