ವೈರಲ್ ಆಡಿಯೋಗೂ ನನಗೂ ಸಂಬಂಧವಿಲ್ಲ : ಕಟೀಲ್
ಮಂಗಳೂರು : ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ವೈರಲ್ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಪೂರ್ಣ ತನಿಖೆಯಾಗಬೇಕೆಂದು ಸಿಎಂಗೆ ಪತ್ರ ಬರೆಯುತ್ತೇನೆ ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿ. ನಮ್ಮಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳೇ ಇಲ್ಲ.
ಹಾಗಾಗಿ, ಈ ವಿಷಯ ಅಪ್ರಸ್ತುತ. ಯಡಿಯೂರಪ್ಪ ನಮ್ಮ ಪಕ್ಷದ ಆತ್ಮ ಹಾಗೂ ಸರ್ವ ಸಮ್ಮತಿಯ ನಾಯಕ. ಈಶ್ವರಪ್ಪ ಹಾಗೂ ಜಗದೀಶ್ ಶೆಟ್ಟರ್ ಮುಂತಾದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ನಮ್ಮ ಪಕ್ಷದ ಸರ್ಕಾರ ನಡೆಯುತ್ತಿದೆ ಎಂದು ಎಂದು ಆಡಿಯೋ ಬಗ್ಗೆ ಸ್ಪಷ್ಟನೆ ನೀಡಿದರು.
ಇದೆ ವೇಳೆ ಆಡಿಯೋ ಬಗ್ಗೆ ತನಿಖೆ ನಡೆಸಲು ಆಗ್ರಹಿಸಿದ ಕಟೀಲ್, ಆಡಿಯೋ ಬಗ್ಗೆ ತನಿಖೆಯಾಗದೇ ಯಾರ ಮೇಲೂ ಸಂಶಯ ವ್ಯಕ್ತಪಡಿಸಲು ಆಗುವುದಿಲ್ಲ. ತನಿಖೆ ಮೂಲಕ ಸತ್ಯ ಹೊರ ಬರಲಿ, ಬಳಿಕ ಎಲ್ಲದಕ್ಕೂ ಉತ್ತರ ನೀಡುತ್ತೇನೆ ಎಂದು ತಿಳಿಸಿದರು.