Nalin kumar kateel | ಬಿಜೆಪಿಗರು ಕಾಂಗ್ರೆಸ್ ಸಂಪರ್ಕದಲ್ಲಿಲ್ಲ : ಕಟೀಲ್
ಬೆಂಗಳೂರು : ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಅನ್ನುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಸೃಷ್ಠಿಸಿದೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ನಮ್ಮವರು ಯಾರು ಕಾಂಗ್ರೆಸ್ ಸಂಪರ್ಕದಲ್ಲಿಲ್ಲ. ಬದಲಾಗಿ ಕಾಂಗ್ರೆಸ್ ನವರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. Nalin kumar kateel reaction on congress leaders statement saaksha tv
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಮೋದಿ ಯೋಚನೆ, ಯೋಜನೆಗಳು, ಮೂರು ವರ್ಷ ಕೋವಿಡ್ ನಡುವೆ ಆಗಿರುವ ಅಭಿವೃದ್ಧಿ, ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದ ಅಭಿವೃದ್ಧಿ ನೋಡಿ ಕಾಂಗ್ರೆಸ್ನಲ್ಲಿ ಭವಿಷ್ಯವಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ನವರು ಬಿಜೆಪಿ ಕಡೆ ಮುಖ ಮಾಡುತ್ತಿದ್ದಾರೆ.ನಮ್ಮವರು ಯಾವೊಬ್ಬ ಶಾಸಕನೂ ಕಾಂಗ್ರೆಸ್ ಸಂಪರ್ಕದಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಬಿಜೆಪಿಗರು ನಮ್ಮ ಸಂಪರ್ಕದಲ್ಲಿದ್ದಾರೆ ಅನ್ನುವ ಮೂಲಕ ಡಿಕೆಶಿ, ಅತಂತ್ರ ಸೃಷ್ಟಿ ಮಾಡಲು ಹೊರಟಿದ್ದಾರೆ. ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಆರೋಪಿಸಿದರು,