Nalin kumar Katil | ತ್ರಿವರ್ಣ ಧ್ವಜದ ಗೌರವಕ್ಕಾಗಿ ಹೋರಾಡಿದ ಪಕ್ಷ ನಮ್ಮದು nalin-kumar-kateel-reaction on d k shivakumar statement saaksha tv
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರು ಜನರ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಭಾರತದ ತ್ರಿವರ್ಣ ಧ್ವಜ ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎನ್ನುವ ಡಿಕೆಶಿ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.
ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಕಟೀಲ್, ತ್ರಿವರ್ಣ ಧ್ವಜದ ಗೌರವಕ್ಕಾಗಿ ಹೋರಾಡಿದ ಪಕ್ಷ ನಮ್ಮದು. ಕಾಶ್ಮೀರದ ಲಾಲ್ ಚೌಕ್, ರಾಜ್ಯದ ಈದ್ಗಾ ಮೈದಾನದಲ್ಲಿ ಮತೀಯ ಕೇಂದ್ರಿತ ವಿರೋಧದ ನಡುವೆಯೂ ತ್ರಿವರ್ಣ ಧ್ವಜ ಹಾರಿಸಿದವರು ನಾವು. ಕಾಂಗ್ರೆಸ್ ಪಕ್ಷ ಮತೀಯ ಭಾವನೆಯನ್ನು ಕೆರಳಿಸುವ ಕೆಲಸ ಮಾಡುತ್ತಿದೆ.
ಕಾಂಗ್ರೆಸ್ ಪಕ್ಷ ದೇಶದ ಜನರಲ್ಲಿ ಅಭದ್ರತೆ ಮೂಡಿಸುತ್ತಿದೆ. ಕಾಂಗ್ರೆಸ್ ಕೋಮು ಸೌಹಾರ್ದವನ್ನು ಕೆಡಿಸುತ್ತಿದೆ. ಕಾಂಗ್ರೆಸ್ ಸೃಷ್ಟಿಸಿದ ಹಿಜಾಬ್ ವಿವಾದದ ಹಿಂದೆ ದೇಶದ ಗೌರವವನ್ನು ಕಡಿಮೆಗೊಳಿಸುವ ಹುನ್ನಾರವಿದೆ.
ರಾಷ್ಟ್ರೀಯ ಪಕ್ಷವೊಂದರ ರಾಜ್ಯ ಘಟಕದ ಅಧ್ಯಕ್ಷರಾದವರು ಮಾತನಾಡುವಾಗ ಹತ್ತು ಬಾರಿ ಯೋಚಿಸಬೇಕು. ತಿರಂಗ ಧ್ವಜವನ್ನು ಇಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎಂಬ ಡಿಕೆಶಿ ಅವರ ಸುಳ್ಳು ಹೇಳಿಕೆ ವಿದ್ಯಾರ್ಥಿ ಸಮುದಾಯವನ್ನು ಉದ್ರೇಕಿಸುವ ಅಪಾಯವಿದೆ ಎಂದು ಆತಂಕ ಹೊರಹಾಕಿದ್ದಾರೆ.









