‘ಬಂಡೆ’ ಪುಡಿಯಾಗಿದೆ, ‘ಹುಲಿಯಾ’ ಗೂಡು ಸೇರಿದೆ : ಕಟೀಲ್
ಮಂಗಳೂರು : ಸಿದ್ದರಾಮಯ್ಯನವರು ಮತ್ತೆ ಮುಖ್ಯಮಂತ್ರಿ ಆಗುವ ಕನಸು ಇನ್ನಾದರೂ ಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟೀಕಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉಪಚುನಾವಣೆಯ ಫಲಿತಾಂಶದಿಂದ ಬಂಡೆ ಪುಡಿಯಾಗಿದೆ. ಕಾಂಗ್ರೆಸ್ ನ ಹುಲಿಯಾ ಗೂಡು ಸೇರಿದೆ. ಚುನಾವಣಾ ಪ್ರಚಾರದ ವೇಳೆ ಸಿದ್ದರಾಮಯ್ಯ ಅವರು ಬಿಜೆಪಿ ಅಲೆ ಎಲ್ಲಿದೆ ಎಂದು ಹೇಳಿದ್ದರು. ಈಗ ಹುಲಿಯಾ ಗೂಡು ಸೇರಿದೆ ಅಂತಾ ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮತ್ತೆ ಮುಖ್ಯಮಂತ್ರಿಯಾಗುವ ಕನಸನ್ನು ಇನ್ನಾದರು ಬಿಡಬೇಕು. ಮುಂದಿನ ಹತ್ತು ವರ್ಷಗಳ ಕಾಲ ಆ ಕನಸನ್ನು ಬಿಡಿ, ಬಾದಾಮಿಯಲ್ಲೂ ಜನ ನಿಮ್ಮನ್ನು ತಿರಸ್ಕಾರ ಮಾಡಲಿದ್ದಾರೆ. ನಿಮ್ಮ ರಾಜಕೀಯ ಭವಿಷ್ಯ ಎಲ್ಲಿ ಎಂದು ಮೊದಲು ಯೋಚನೆ ಮಾಡಿ ಎಂದು ಸಿದ್ದರಾಮಯ್ಯ ವಿರುದ್ಧ ಕಟೀಲ್ ವಾಗ್ದಾಳಿ ನಡೆಸಿದರು.
ದೀಪಾವಳಿ ಬಳಿಕ ಸಂಪುಟ ವಿಸ್ತರಣೆ : ಯಾರು ಇನ್..? ಯಾರು ಔಟ್..?
ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಸಂಘಟನಾತ್ಮಕವಾಗಿ ಕೆಲಸ ಮಾಡಿದೆ. ಶಿರಾದಲ್ಲಿ ಎಲ್ಲರ ಪರಿಶ್ರಮದಿಂದ ಬಿಜೆಪಿ ಗೆಲುವು ಸಾಧಿಸಿದೆ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಯಾಗಿಲ್ಲ, ಚುನಾವಣೆ ಸಂಧರ್ಭದಲ್ಲಿ ಸರ್ಕಾರದ ವಿರುದ್ಧ ಆರೋಪ ಮಾಡಿದರು. ಆದರೆ ಕಾಂಗ್ರೆಸ್ ಭ್ರಷ್ಟಾಚಾರದ ಪಾರ್ಟಿ ಎಂದು ಸಾಬೀತಾಗಿದೆ ಎಂದು ಕಟೀಲ್ ದೂರಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel