ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಬೆಲೆಯಿಲ್ಲ : ಕಟೀಲ್
ತುಮಕೂರು : ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ನಲ್ಲಿ ಕಳೆದುಹೋಗುವ ಭಯವಿದೆ. ಕಾಂಗ್ರೆಸ್ ನಲ್ಲಿ ಅವರ ನಾಯಕತ್ವಕ್ಕೆ ಬೆಲೆಯಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತಿನ ಯುದ್ಧ ಮುಂದುವರಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಕಳೆದು ಹೋಗುವ ಭಯವಿದೆ.
ಅದಕ್ಕಾಗಿಯೇ ಸಿಎಂ ಬಿಎಸ್ ಯಡಿಯೂರಪ್ಪ ಮೇಲೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.
ಇದೇ ವೇಳೆ ಉಪಚುನಾವಣೆ ಬಗ್ಗೆ ಮಾತನಾಡಿದ ರಾಜರಾಜೇಶ್ವರಿ ನಗರ ಹಾಗೂ ಶಿರಾ, ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಾಗಲಿದೆ.
ಶಿರಾದಲ್ಲಿ ನಾವು 25 ಸಾವಿರ ಮತಗಳಿಂದ ಗೆಲ್ಲಲಿದ್ದು, ಆರ್ ಆರ್ ನಗರದಲ್ಲಿ 40 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದೇವೆ.
ಸಮೀಕ್ಷೆ ಏನೇ ಹೇಳಿದ್ರೂ ಗೆಲುವು ನಮ್ಮದೇ : ಸಿದ್ದರಾಮಯ್ಯ
ಈ ಉಪಚುನಾವಣೆಯಲ್ಲಿ ನಮ್ಮ ಗೆಲುವು ನಿಶ್ಚಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಡಿ.ಕೆ ಶಿವಕುಮಾರ್ ರಾಜರಾಜೇಶ್ವರಿ ನಗರದ ಉಸ್ತುವಾರಿ ವಹಿಸಿಕೊಂಡಿದ್ದರು.
ಶಿರಾ ಚುನಾವಣಾ ಉಸ್ತುವಾರಿಯನ್ನು ಸಿದ್ದರಾಮಯ್ಯ ವಹಿಸಿಕೊಂಡಿದ್ದರು. ಶಿರಾದಲ್ಲಿ ಕಾಂಗ್ರೆಸ್ ಸೋಲಿಸುವುದಕ್ಕೆ ಡಿಕೆ ಶಿವಕುಮಾರ್ ತಲೆಬಿಸಿ ಮಾಡಿಕೊಂಡಿದ್ದರು.
ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆ
ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಸೋಲಿಸುವುದಕ್ಕೆ ಸಿದ್ದರಾಮಯ್ಯ ತಲೆಬಿಸಿ ಮಾಡಿಕೊಂಡಿದ್ದರು.
ಸಿದ್ದರಾಮಯ್ಯ ಶಿರಾದಲ್ಲಿ ಕಾಂಗ್ರೆಸ್ ಗೆಲುವುದನ್ನ ಯೋಚನೆ ಮಾಡೋದು ಬದಲು ಆರ್ ಆರ್ ನಗರವನ್ನ ಸೋಲಿಸೋದು ಹೇಗೆ ಅಂತ ತಲೆಕೆಡಿಸಿಕೊಂಡಿದ್ದರು.
ಕಾಂಗ್ರೆಸ್ಸಿನ ಆಂತರಿಕ ಜಗಳ ಈಗ ಬೀದಿಜಗಳವಾಗಿದೆ. ಈ ಚುನಾವಣೆ ಬಳಿಕ ಕಾಂಗ್ರೆಸ್ ಜಗಳ ಬೀದಿ ಕಾಳಗವಾಗಲಿದೆ ಎಂದು ಕುಟುದರು.
ಇದೇ ವೇಳೆ ಕೆಲ ಕಾಂಗ್ರೆಸ್ ನಾಯಕರು ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿದ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ಸಿನವರಿಗೆ ಯಾವಾಗ ಸೋಲಾಗುತ್ತೋ ಆಗ ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸುತ್ತಾರೆ ಎಂದು ಕಿಡಿಕಾರಿದ ಕಟೀಲ್, ಇವಿಎಂ ದೋಷವಿದ್ದರೆ ಡಿಕೆಶಿ, ಸಿದ್ದರಾಮಯ್ಯ ಗೆಲ್ಲುವುದಕ್ಕೆ ನಾವು ಬಿಡ್ತಿದ್ವಾ ಎಂದು ಹೇಳಿದರು..
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel