Nalin Kumar Kateel | 40% ಕಮಿಷನ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ
ಮಂಗಳೂರು : 40% ಕಮಿಷನ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ ? ಇದ್ದರೆ ಕೊಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು, 40 % ಕಮಿಷನ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, 40% ಕಮಿಷನ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ? ಇದ್ದರೆ ಕೊಡಲಿ. ಜಯಮಾಲಾ ಅವರು ಕಾಂಗ್ರೆಸ್ ಗೆ ಹಣ ಕೊಡಲು ಮೊಟ್ಟೆಯಲ್ಲಿ ಹಣ ಮಾಡಿದ್ರು, ಕಾಂಗ್ರೆಸ್ ಪಕ್ಷ ನೆರೆ ಸಂಗ್ರಹದ ಹಣದಲ್ಲೇ ಲೂಟಿ ಮಾಡಿದ 80% ಪಕ್ಷ ಎಂದು ಆರೋಪಿಸಿದರು.
ಈ ಪಕ್ಷಕ್ಕೆ ನೈತಿಕತೆ ಇದ್ರೆ ಸಾಕ್ಷ್ಯ ಕೊಡಲಿ, ಕೆಂಪಣ್ಣನೂ ಸಾಕ್ಷ್ಯ ಕೊಡಲಿ. ಕೆಂಪಣ್ಣ ಸುಮ್ಮನೆ ಮಾತನಾಡುವ ಬದಲು ಪುರಾವೆ ಕೊಟ್ಟರೆ ನಾವು ನೋಡ್ತೇವೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಾಜಿ ಸಚಿವ ಈಶ್ವರಪ್ಪರಿಗೆ ಬೆದರಿಕೆ ಪತ್ರ ಬಗ್ಗೆ ಪ್ರತಿಕ್ರಿಯೆ ನೀಡಿದ ಕಟೀಲ್, ಸರ್ಕಾರ ಈಶ್ವರಪ್ಪನವರಿಗೆ ಭದ್ರತೆ ಕೊಡುತ್ತದೆ. ಈದ್ಗಾ ಮೈದಾನ ಸರ್ಕಾರಿ ಜಾಗ, ಅಲ್ಲಿ ಗಣೇಶ ಪ್ರತಿಮೆ ಇಡಬಹುದು. ಸ್ಥಳೀಯ ಆಡಳಿತಕ್ಕೆ ಅರ್ಜಿ ಕೊಟ್ಟರೆ ಗಣೇಶೋತ್ಸವಕ್ಕೆ ಅವಕಾಶ ಕೊಡುತ್ತಾರೆ. ಸರ್ಕಾರಿ ಜಾಗದಲ್ಲಿ ಮಾಡಲು ಬಿಡಲ್ಲ ಅನ್ನೋದಕ್ಕೆ ಅದು ಯಾರಪ್ಪನ ಆಸ್ತಿಯೂ ಅಲ್ಲ. ಸರ್ಕಾರಿ ಜಾಗದಲ್ಲಿ ಸಾರ್ವಜನಿಕ ಕಾರ್ಯಕ್ರಮ ಮಾಡಲು ಅವಕಾಶ ಕೊಡಲೇಬೇಕು ಎಂದು ಒತ್ತಾಯಿಸಿದರು. Nalin Kumar Kateel What is the evidence regarding 40% commission