ನಾಮನಿರ್ದೇಶನಗೊಂಡ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರಿಗೆ ಅಭಿನಂದನೆ ತಿಳಿಸಿದ ನಳಿನ್ ಕುಮಾರ್ ಕಟೀಲ್
ಕೊಪ್ಪಳ : ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿಯಲ್ಲಿ ರಾಜ್ಯಸಭಾ ಸದಸ್ಯ ಅಭ್ಯರ್ಥಿಗಳಾಗಿ ನಾಮ ನಿರ್ದೇಶನಗೊಂಡಿರುವ ಅಶೋಕ್ ಗಸ್ತಿ ಅವರಿಗೆ ಸಿಹಿ ತಿನ್ನಿಸಿ, ಅಭಿನಂದನೆ ಸಲ್ಲಿಸಿದರು. ಇದೆ ವೇಳೆ ಈರಣ್ಣ ಕಡಾಡಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಅಭಿನಂದನೆ ಸಲ್ಲಿಸಿದರು.
ಇಂದು ಬೆಳಿಗ್ಗೆ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರನ್ನು ರಾಜ್ಯಸಭೆಗೆ ಬಿಜೆಪಿ ನಾಮನಿರ್ದೇಶನ ಮಾಡಿತ್ತು. ಈ ಇಬ್ಬರು ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿದ್ದರು. ಸರಿಸುಮಾರ ಮೂರು ದಶಕಗಳಿಂದ ಬಿಜೆಪಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಇವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಆದ್ದರಿಂದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ಬಳ್ಳಾರಿ ವಿಭಾಗದಲ್ಲಿ ನಡೆದ ಸಂಘಟನಾ ಸಭೆಯಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಸಚಿವರಾದ ಆನಂದ್, ಸಂಸದ ದೇವೇಂದ್ರಪ್ಪ, ಶಾಸಕ ಸೋಮಶೇಖರ ರೆಡ್ಡಿ. ಸೋಮಲಿಂಗಪ್ಪ, ಹಾಲಪ್ಪ ಆಚಾರ್ ಸೇರಿದಂತೆ ಹಲವು ವಿಭಾಗದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.








