ಮಡಿಕೇರಿ : ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಧಮ್ ಇದ್ದರೇ ಚಿದಂಬರಂ ಮುಂದೆ ನಿಂತು ಮಾತನಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Katil )ಸವಾಲ್ ಹಾಕಿದ್ದಾರೆ.
ಮಡಿಕೇರಿಯಲ್ಲಿ ಇಂದು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು. ಇದರಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಸಿದ್ದರಾಮಯ್ಯರ “ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ಧಮ್ ನಿಮಗಿದೆಯೇ ಕಟೀಲ್ ಅವರೇ?” ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಕೊರೊನಾಗೆ ಲಸಿಕೆ ಬಂದಾಗ ಆತ್ಮನಿರ್ಭರ ಭಾರತ್ ಅಡಿಯಲ್ಲಿ ಯಾವೆಲ್ಲ ರಾಜ್ಯಗಳಿಗೆ ಹೇಗೆ ತಲುಪಿಸಬೇಕೋ ಹಾಗೆ ತಲುಪಿಸುತ್ತೇವೆ. ಅದನ್ನು ಯಾರಿಂದಲೂ ಹೇಳಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಸಿದ್ದರಾಮಯ್ಯ ಮೊದಲು ಸಂಸ್ಕಾರ ಮತ್ತು ಸಂಸ್ಕøತಿ ಇಟ್ಟುಕೊಂಡು ಮಾತನಾಡುವುದನ್ನು ಕಲಿಯಬೇಕು ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ : ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸೋ ಧಮ್ ನಿಮಗಿದೆಯೇ ಕಟೀಲ್ ಅವರೇ : ಸಿದ್ದರಾಮಯ್ಯ
ಇದೇ ವೇಳೆ ಉಪಚುನಾವಣೆ ಬಗ್ಗೆ ಮಾತನಾಡಿ, ಎರಡು ಕ್ಷೇತ್ರಗಳಲ್ಲಿಯೂ ನಮ್ಮ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ ನಳಿನ್ ಕುಮಾರ್ ಕಟೀಲ್ ಅವರೇ?
ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವವರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ಧಮ್ ನಿಮಗಿದೆಯೇ ಕಟೀಲ್ ಅವರೇ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.ಇದಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ಕೊಟ್ಟಿದ್ದಾರೆ.
ಇದನ್ನೂ ಓದಿ : ಸಿದ್ದರಾಮಯ್ಯ ನಿಮ್ಮ ಮಾತಿನ ಮೇಲೆ ಹಿಡಿತ ಇರಲಿ : ಹೆಚ್.ವಿಶ್ವನಾಥ್ ಗರಂ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel