ಕೊರೊನಾ ರೋಗಿ ಶವಸಂಸ್ಕಾರದ ವೇಳೆ ಅನ್ಯ ವ್ಯಕ್ತಿಗಳು ಹಾಜರಿದ್ದರೆ ಕೇಸ್ ದಾಖಲು – ನಳಿನ್ ಕುಮಾರ್ ಕಟೀಲ್
ಮಂಗಳೂರು, ಜುಲೈ 1: ಸಂಸದ ನಳಿನ್ ಕುಮಾರ್ ಕಟೀಲ್ ಅವರು ಯಾರಾದರೂ ಅನ್ಯ ವ್ಯಕ್ತಿಗಳು ಕೊರೊನಾ ರೋಗಿಯ ಶವಸಂಸ್ಕಾರ ಸಂದರ್ಭದಲ್ಲಿ ಹಾಜರಿದ್ದರೆ ಅವರ ವಿರುದ್ದ ಕೇಸು ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಪ್ರಗತಿ ಪರಿಶೀಲನೆ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲೆಯಲ್ಲಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರುತ್ತಿದೆ. ಈ ಹಿನ್ನಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯ ಸಾಮರ್ಥ್ಯ ಮೀರುವ ಸಾಧ್ಯತೆ ಇದ್ದು, ಖಾಸಗಿ ಆಸ್ಪತ್ರೆಗಳಲ್ಲೂ ಹೆಚ್ಚುವರಿ ಬೆಡ್ ಗಳನ್ನು ಕಾದಿರಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು.
ಸರ್ಕಾರದ ಮಾರ್ಗಸೂಚಿಯಂತೆ ಕೊರೊನಾ ರೋಗಿಯ ಶವಸಂಸ್ಕಾರವನ್ನು ಮಾಡುವಾಗ ಸಂಬಂಧಪಟ್ಟ ಸಿಬ್ಬಂದಿಗಳು ಮಾತ್ರ ಪಿ.ಪಿ.ಟಿ ಕಿಟ್ ಧರಿಸಿ ಪಾಲ್ಗೊಳ್ಳಬೇಕು. ಬೇರೆ ವ್ಯಕ್ತಿಗಳಿಗೆ ಅಲ್ಲಿ ಹಾಜರಿರಲು ಅವಕಾಶ ನೀಡಬಾರದು. ಅನ್ಯ ವ್ಯಕ್ತಿಗಳು ಶವಸಂಸ್ಕಾರ ಸಂದರ್ಭದಲ್ಲಿ ಹಾಜರಿದ್ದ ಪಕ್ಷದಲ್ಲಿ ಅಂತಹವರ ವಿರುದ್ಧ ಕೇಸು ದಾಖಲಿಸುವಂತೆ ನಳಿನ್ ಕುಮಾರ್ ಕಟೀಲು ಸೂಚಿಸಿದರು.