ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ : ಕಟೀಲ್
ಕೊಪ್ಪಳ : ಅಕ್ರಮ ಗಣಿಗಾರಿಕೆ, ಅಕ್ರಮ ಮರಳು ದಂಧೆ ಶುರುವಾಗಿದ್ದು ಸಿದ್ದರಾಮಯ್ಯ ಕಾಲದಲ್ಲಿ. ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಿದ್ದು ಸಿದ್ದರಾಮಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಬಿಜೆಪಿ ದೇಶಕ್ಕೆ ಕೊಟ್ಟ ಬಹುದೊಡ್ಡ ಬಳುವಳಿ ನಿರುದ್ಯೋಗ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಕೊಪ್ಪಳದಲ್ಲಿ ಪ್ರತಿಕ್ರಿಯೆ ನೀಡಿದ ಕಟೀಲ್, ಬಿಜೆಪಿ ಸರ್ಕಾರ ಬಂದ ಮೇಲೆ ಕಳ್ಳಕಾಕರು ನಿರುದ್ಯೋಗಿಗಳಾಗಿದ್ದಾರೆ.
ಕಳ್ಳಕಾಕರು ಎಂದರೆ ಬೇರೆ ಯಾರೂ ಅಲ್ಲ, ತಿಹಾರ್ ಜೈಲಿಗೆ ಹೋಗಿ ಬಂದವರು ಎಂದು ಟ್ರಬಲ್ ಶೂಟರ್ ತಿರುಗೇಟು ನೀಡಿದರು.
ಇನ್ನು ಕಾಂಗ್ರೆಸ್ ನವರೆಲ್ಲರೂ ಭ್ರಷ್ಟಾಚಾರದ ಹಿನ್ನೆಲೆ ಇರುವವರು. ನಮ್ಮ ಸರ್ಕಾರ ಬಂದ ಮೇಲೆ ಇಂದು ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತಾಗಿದೆ.
ರಾಜಕೀಯದ ಹೆಸರಿನಲ್ಲಿ ಅವರು ಹಣ ಗಳಿಸಲು ವಿಫಲರಾಗುತ್ತಿದ್ದಾರೆ. ಇಂತಹವರು ಇಂದು ನಿರುದ್ಯೋಗಿಗಳಾಗಿದ್ದಾರೆ ಎಂದು ಕಟೀಲ್ ಕುಟುಕಿದ್ದಾರೆ.
ಇದೇ ವೇಳೆ ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆಗೆ ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಕಾರಣ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿ,
ಅಕ್ರಮ ಗಣಿಗಾರಿಕೆ, ಅಕ್ರಮ ಮರಳು ದಂಧೆ ಶುರುವಾಗಿದ್ದು ಸಿದ್ದರಾಮಯ್ಯ ಕಾಲದಲ್ಲಿ. ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಿದ್ದು ಸಿದ್ದರಾಮಯ್ಯ ಎಂದು ದೂರಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel