ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Namma clinic: ನಮ್ಮ ಕ್ಲಿನಿಕ್‌ ಮೂಲಕ 30 ವರ್ಷ ಮೇಲ್ಪಟ್ಟ ವ್ಯಕ್ತಿಗೂ ಮಧುಮೇಹ ತಪಾಸಣೆ – ಡಾ.ಕೆ.ಸುಧಾಕರ್‌

ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ʼನಮ್ಮ ಕ್ಲಿನಿಕ್‌ʼ ಮೂಲಕ 30 ವರ್ಷ ವಯಸ್ಸು ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹದ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

Naveen Kumar B C by Naveen Kumar B C
November 28, 2022
in Newsbeat, Health, ಆರೋಗ್ಯ
Dr. sudhakar
Share on FacebookShare on TwitterShare on WhatsappShare on Telegram

ನಮ್ಮ ಕ್ಲಿನಿಕ್‌ ಮೂಲಕ 30 ವರ್ಷ ಮೇಲ್ಪಟ್ಟ ವ್ಯಕ್ತಿಗೂ ಮಧುಮೇಹ ತಪಾಸಣೆ – ಡಾ.ಕೆ.ಸುಧಾಕರ್‌

ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ʼನಮ್ಮ ಕ್ಲಿನಿಕ್‌ʼ ಮೂಲಕ 30 ವರ್ಷ ವಯಸ್ಸು ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹದ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಆರೋಗ್ಯ ಸಿಟಿ ಸಮ್ಮಿಟ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಅಸಾಂಕ್ರಾಮಿಕ ರೋಗಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದರ ನಿರ್ವಹಣೆಗೆ ನಗರಗಳಲ್ಲಿ 438 ʼನಮ್ಮ ಕ್ಲಿನಿಕ್‌ʼಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಕೊಳೆಗೇರಿ, ಬಡ ಜನರು ವಾಸಿಸುವ ಪ್ರದೇಶಗಳಲ್ಲಿ ಇಂತಹ ಕ್ಲಿನಿಕ್‌ ಆರಂಭಿಸಿ ಜನರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಈ ಮೂಲಕ ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳಿರುವ ಜನರ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಒಟ್ಟು ಮಧುಮೇಹಿಗಳಲ್ಲಿ 75% ಜನರು ಚಿಕಿತ್ಸೆಯನ್ನೇ ಪಡೆಯುತ್ತಿಲ್ಲ. ಆದ್ದರಿಂದ 30 ವರ್ಷ ವಯಸ್ಸು ಮೇಲ್ಪಟ್ಟ ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ ಮಧುಮೇಹ ಪತ್ತೆ ಮಾಡಲು ಪ್ರಯತ್ನಿಸಲಾಗುತ್ತಿದೆ.

6,500 ಕ್ಕೂ ಅಧಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಈಗಾಗಲೇ ಆರಂಭಿಸಲಾಗಿದೆ. ಇವುಗಳ ಮೂಲಕ ಕೂಡ ಮಧುಮೇಹ ತಪಾಸಣೆ ಮಾಡಲಾಗುವುದು. 200 ಕ್ಕೂ ಅಧಿಕ ನಮ್ಮ ಕ್ಲಿನಿಕ್‌ ಸಿದ್ಧವಾಗಿದ್ದು, ತಿಂಗಳಾಂತ್ಯದಲ್ಲಿ ಬೇರೆ ಪ್ರದೇಶಗಳಲ್ಲಿ 100 ಹಾಗೂ ಒಂದು ವಾರದ ಬಳಿಕ ಬೆಂಗಳೂರು ನಗರದಲ್ಲಿ ಕ್ಲಿನಿಕ್‌ ಉದ್ಘಾಟಿಸಲಾಗುವುದು ಎಂದು ವಿವರಿಸಿದರು.

30 ವರ್ಷ ವಯಸ್ಸಿನ ಮಧುಮೇಹಿಯೊಬ್ಬರು ಗ್ಯಾಂಗ್ರಿನ್‌ನಿಂದ ಕಾಲಿಗೆ ಹಾನಿ ಮಾಡಿಕೊಂಡಿದ್ದರು. ಆದರೆ ಅವರಿಗೆ ಮಧುಮೇಹ ಇದೆ ಎಂಬುದೇ ಗೊತ್ತಿರಲಿಲ್ಲ. ಇಂತಹ ನಿರ್ಲಕ್ಷ್ಯ, ಜಾಗೃತಿಯ ಕೊರತೆ ಎಲ್ಲೆಡೆ ಕಂಡುಬರುತ್ತಿದೆ. ಪ್ರತಿ ವರ್ಷ ಆರೋಗ್ಯ ತಪಾಸಣೆಯನ್ನು ಕೂಡ ಜನರು ಮಾಡಿಕೊಳ್ಳುವುದಿಲ್ಲ. ಜನರು ವರ್ಷಕ್ಕೊಮ್ಮೆ ಕಡ್ಡಾಯವಾಗಿ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.

50% ಜನರಿಗೆ ಆರೋಗ್ಯ ತಪಾಸಣೆ

ಕಳೆದ ಮೂರು ವರ್ಷಗಳಲ್ಲಿ ರಾಜ್ಯದ 50% ಜನರನ್ನು ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಳಪಡಿಸಲಾಗಿದೆ. ಮುಂದಿನ 18 ತಿಂಗಳಲ್ಲಿ ರಾಜ್ಯದ 100% ಜನರಿಗೆ ಆರೋಗ್ಯ ತಪಾಸಣೆ ಮಾಡಿಸಬೇಕು ಎಂಬುದು ನನ್ನ ಗುರಿಯಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಆರಂಭಿಸಿದ ಇ ಮನಸ್‌ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಮಾದರಿಯಾಗಿಸಿಕೊಂಡು ಹೊಸ ಕಾರ್ಯಕ್ರಮ ಆರಂಭಿಸಿದೆ. ಅನೇಕರಿಗೆ ಮಾನಸಿಕ ಸಮಸ್ಯೆ ಇದೆ ಎಂದೇ ಗೊತ್ತಿರುವುದಿಲ್ಲ. ಕ್ಯಾನ್ಸರ್‌ ವಿಚಾರದಲ್ಲೂ ಹೀಗೆಯೇ ಆಗುತ್ತಿದೆ. ಕಿದ್ವಾಯಿ ಸಂಸ್ಥೆ ಮೂಲಕ ಕ್ಯಾನ್ಸರ್‌ ಬಗ್ಗೆ ಹೆಚ್ಚು ಅರಿವು ಮೂಡಿಸಲಾಗುತ್ತಿದೆ. ರೋಗ ಬರುವುದಕ್ಕಿಂತ ಮೊದಲು ರೋಗ ಪೂರ್ವದ ನಿಯಂತ್ರಣ ಕ್ರಮಗಳಿಗೆ ಆದ್ಯತೆ ನೀಡಲಾಗಿದೆ ಎಂದರು

ಬೆಂಗಳೂರು ನಗರ ಐಟಿ ನಗರವಾಗಿ ಅಭಿವೃದ್ಧಿಯಾಗಿದೆ. ಈಗ ಇದು ಆರೋಗ್ಯ ನಗರವಾಗಿ ಬೆಳೆಯುತ್ತಿದೆ. 1.3 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ, ಮಾಲಿನ್ಯ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಕಳೆದ ಎರಡು ಮೂರು ದಶಕಕ್ಕೆ ಹೋಲಿಸಿದರೆ ಈಗ ಜನರ ಗರಿಷ್ಠ ವಯೋಮಿತಿ ಹೆಚ್ಚಾಗಿದೆ. ಹಿಂದೆ 40-52 ವಯೋಮಿತಿ ಇದ್ದು, ಈಗ 65-67 ಆಗಿದೆ. ವಯೋಮಿತಿ ಹೆಚ್ಚಳದ ಮೂಲಕ ನಾವು ಅಭಿವೃದ್ಧಿ ಸಾಧಿಸಿದ್ದೇವೆ ಎನ್ನಬಹುದು. ಆದರೆ ಎಷ್ಟು ವರ್ಷ ಬದುಕುತ್ತೇವೆ ಎನ್ನುವುದಕ್ಕಿಂತ ಎಷ್ಟು ಆರೋಗ್ಯಕರವಾಗಿ ಬದುಕುತ್ತೇವೆ ಎಂಬುದು ಮುಖ್ಯ ಎಂದರು.

ಕೋವಿಡ್‌ ಸಾಂಕ್ರಾಮಿಕವನ್ನು ನಾವೆಲ್ಲರೂ ನೋಡಿದ್ದೇವೆ. ಆದರೆ ವಾಸ್ತವದಲ್ಲಿ ಸಾಂಕ್ರಾಮಿಕಕ್ಕಿಂತ ಅಸಾಂಕ್ರಾಮಿಕ ರೋಗಗಳೇ ಹೆಚ್ಚು ಸಮಾಜವನ್ನು ಕಾಡುತ್ತಿವೆ. ಅಭಿವೃದ್ಧಿಶೀಲ ಹಾಗೂ ಹಿಂದುಳಿದ ದೇಶಗಳಲ್ಲಿ ಅಸಾಂಕ್ರಾಮಿಕ ರೋಗಗಳು ಹೆಚ್ಚು ದುಷ್ಪರಿಣಾಮ ಬೀರುತ್ತಿವೆ. ಅದರಲ್ಲೂ ಭಾರತದಲ್ಲಿ ಮಧುಮೇಹ ಹೆಚ್ಚು ಜನರನ್ನು ಕಾಡುತ್ತಿದೆ. ಸಂಸ್ಕರಿತ ಸಕ್ಕರೆ ಬಹಳ ಹಿಂದೆ ದೇಶದಲ್ಲಿ ಕಂಡುಬಂದಿತ್ತು ಎಂದರು.

ಮಕ್ಕಳು ಫಾಸ್ಟ್‌ ಫುಡ್‌ಗೆ ಬೇಗನೆ ಹೊಂದಿಕೊಳ್ಳುತ್ತಿದ್ದಾರೆ. ಮಕ್ಕಳು ಹೊರಗೆ ಆಟವಾಡುವುದು ಕೂಡ ಕಡಿಮೆಯಾಗಿದೆ. ಹಿಂದಿನ ಜನಾಂಗ ಹೆಚ್ಚು ಆಟ, ಓಡಾಟ ಮಾಡುತ್ತಿದ್ದರು. ಇದರಿಂದಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಲವಾಗಿದ್ದರು. ಈ ಬಗ್ಗೆ ಹೆಚ್ಚು ಜಾಗೃತಿ ಈಗ ಅಗತ್ಯವಿದೆ ಎಂದರು.

 

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

Namma clinic: Diabetes screening for people above 30 years through our clinic – Dr. K. Sudhakar

Tags: Dr. K SudhakarNamma clinic
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram