ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Minister Dr. K. Sudhakar | ರಾಜ್ಯದಲ್ಲಿ 3 ತಿಂಗಳಲ್ಲಿ 470 ಕ್ಕೂ ಹೆಚ್ಚು ಕಡೆ ʼನಮ್ಮ ಕ್ಲಿನಿಕ್‌ʼ ಆರಂಭ

Mahesh M Dhandu by Mahesh M Dhandu
July 16, 2022
in Newsbeat, State, ಬೆಂಗಳೂರು
Sudakar Saaksha Tv
Share on FacebookShare on TwitterShare on WhatsappShare on Telegram

Minister Dr. K. Sudhakar | ರಾಜ್ಯದಲ್ಲಿ 3 ತಿಂಗಳಲ್ಲಿ 470 ಕ್ಕೂ ಹೆಚ್ಚು ಕಡೆ ʼನಮ್ಮ ಕ್ಲಿನಿಕ್‌ʼ ಆರಂಭ

ಬೆಂಗಳೂರು : ಕೋವಿಡ್‌ ನಿರ್ವಹಣೆಯಲ್ಲಿ ಸರ್ಕಾರ ಉತ್ತಮ ಸಾಧನೆ ಮಾಡಿದ್ದು, ಮುಂದಿನ 75 ದಿನಗಳಲ್ಲಿ 18 ರಿಂದ 59 ವಯೋಮಿತಿಯ ನಾಲ್ಕೂವರೆ ಕೋಟಿ ಜನರಿಗೆ ಉಚಿತ ಬೂಸ್ಟರ್‌ ಡೋಸ್‌ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ Minister Dr. K. Sudhakar ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

Related posts

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

August 4, 2026
ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

August 4, 2026

ಬೆಂಗಳೂರಿನಲ್ಲಿ ಲಸಿಕಾಕರಣ ಕಾರ್ಯಕ್ರಮದಲ್ಲಿ ಮಾತನಾಡಿದ Minister Dr. K. Sudhakar ಅವರು, ಕರ್ನಾಟಕ ಶೇ.100 ಕ್ಕೂ ಅಧಿಕ ಪ್ರಮಾಣದಲ್ಲಿ ಎರಡೂ ಡೋಸ್‌ ಲಸಿಕೆ ನೀಡಿದೆ. 3ನೇ ಡೋಸ್‌ ಅನ್ನು ಕೂಡ ಮುಂದಿನ 75 ದಿನಗಳಲ್ಲಿ ರಾಜ್ಯದ 18 ರಿಂದ 59 ವಯೋಮಿತಿಯ ನಾಲ್ಕೂವರೆ ಕೋಟಿ ಜನರಿಗೆ ಕೊಡಬೇಕು ಅನ್ನುವ ಗುರಿ ಇದೆ. ಈ ಗುರಿ ತಲುಪಲು ಪೂರಕ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದೇವೆ. ರಾಜ್ಯದ ವಿವಿಧೆಡೆ ಏಳೂವರೆ ಸಾವಿರ ಸರ್ಕಾರಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜನರು ಇದರ ಸಂಪೂರ್ಣ ಲಾಭ ಪಡೆಯಬೇಕು ಎಂದು ಕೋರಿದರು.

ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಡೀ ದೇಶಕ್ಕೆ ಕೊರೊನಾ ಲಸಿಕೆಯ 2 ಡೋಸ್‌ಗಳನ್ನು ಉಚಿತವಾಗಿ ನೀಡಿದ್ದರು. ಶುಕ್ರವಾರದಿಂದ ಬೂಸ್ಟರ್‌ ಡೋಸ್‌ ಅನ್ನು ಕೂಡ ಉಚಿತವಾಗಿ ನೀಡುವ ಕಾರ್ಯಕ್ರಮ ಆರಂಭವಾಗಿದೆ. ಈ ರೀತಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ರಾಜ್ಯದ 75 ವಿವಿಧ ಕ್ಷೇತ್ರಗಳಲ್ಲಿ ಲಸಿಕಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಅಮೃತಹಸ್ತದಿಂದ ಏಕ ಕಾಲಕ್ಕೆ ಆರಂಭ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Namma clinic has started in more than 470 places in the state in 3 months saaksha tv
Namma clinic has started in more than 470 places in the state in 3 months saaksha tv

ಇತ್ತೀಚೆಗೆ ಅನೇಕರಿಗೆ ಕೋವಿಡ್‌ ಬಂದರೆ ಏನಾಗುತ್ತೆ ಅನ್ನುವ ಉದಾಸೀನತೆ ಇದೆ. 2 ಡೋಸ್‌ ಲಸಿಕೆ ತೆಗೆದುಕೊಂಡು 6 ತಿಂಗಳುಗಳ ಮೇಲಾಗಿದೆ. ಇನ್ನೂ ಕೆಲವರು 2ನೇ ಡೋಸ್‌ ತೆಗೆದುಕೊಂಡು 1 ವರ್ಷದ ಮೇಲಾಗಿದೆ. ಇಂತಹವರಿಗೆ ಅಪಾಯ ಇರುತ್ತದೆ.  ಹೀಗಾಗಿ ಲಸಿಕಾಕರಣವನ್ನು ಗಂಭಿರವಾಗಿ ತೆಗೆದುಕೊಳ್ಳಲು ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ನೀಡಿದೆ. ಇಲ್ಲಿಯ ತನಕ ಕೋವಿಡ್‌ ವಿರುದ್ಧ ಯಶಸ್ವಿಯಾಗಿ ಹೋರಾಟ ಮಾಡಲು ಲಸಿಕಾಕರಣದ ವೇಗವೇ ಕಾರಣವಾಗಿದೆ. ಹೀಗಾಗಿ ಎಲ್ಲರೂ ಬೂಸ್ಟರ್‌ ಡೋಸ್‌ ಪಡೆದುಕೊಳ್ಳಿ ಏಂದು ಮನವಿ ಮಾಡಿದರು.

ಮುಖ್ಯಮಂತ್ರಿಗಳು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಮುತುವರ್ಜಿ ವಹಿಸಿದ್ದಾರೆ. ಶೀಘ್ರದಲ್ಲಿ ರಾಜ್ಯದಲ್ಲಿ 470 ಕಡೆಗಳಲ್ಲಿ ʼನಮ್ಮ ಕ್ಲಿನಿಕ್‌ʼ ಆರಂಭವಾಗಲಿದೆ. ಮುಂದಿನ ಮೂರು ತಿಂಗಳ ಒಳಗೆ ಈ ಕ್ಲಿನಿಕ್‌ಗಳು ಆರಂಭವಾಗಲಿವೆ. ರಾಜಧಾನಿ ಬೆಂಗಳೂರಿನಲ್ಲಿ 243 ನಮ್ಮ ಕ್ಲಿನಿಕ್‌ ಆರಂಭವಾಗಲಿದೆ. ಜುಲೈ 28ಕ್ಕೆ ಅಥವಾ ಆಗಸ್ಟ್‌ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಮೊದಲ ಕ್ಲಿನಿಕ್‌ ಆರಂಭಿಸಲು ಹಗಲಿರುಳು ಶ್ರಮಿಸಲಾಗುತ್ತಿದೆ ಎಂದರು.

ಯಾವ ದೇಶದಲ್ಲೂ ಕೊರೊನಾ ಉಚಿತ ಲಸಿಕೆ ನೀಡಿಲ್ಲ. ವಿದೇಶದಲ್ಲಿ ಕೊರೊನಾ ಪರೀಕ್ಷೆ ಮಾಡಲು ಕೂಡ 10,000 ರೂ. ಕೊಡಬೇಕು. ಆದರೆ 133 ಕೋಟಿ ಜನರಿರುವ ದೇಶದಲ್ಲಿ ಕೊರೊನಾ ಟೆಸ್ಟ್‌, ಲಸಿಕೆ ಎಲ್ಲವೂ ಉಚಿತ. ಕೊರೊನಾ ನಿಯಂತ್ರಣ ಮಾಡುವಲ್ಲಿ ಪ್ರಧಾನಿಯವರ ಹಾಗೂ ಕೇಂದ್ರ ಸರ್ಕಾರದ ಕೊಡುಗೆ ದೊಡ್ಡದು. ಇಂತಹ ಸಮರ್ಥ ನಾಯಕತ್ವವನ್ನು ಜನರು ಜನ ಮರೆಯುವ ಹಾಗಿಲ್ಲ ಎಂದರು. ಜೊತೆಗೆ ಕೊರೊನಾ ನಿರ್ವಹಣೆ ಮಾಡಲು ಶ್ರಮಿಸಿದ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಸ್ವಯಂ ಸೇವಕರುಗಳಿಗೆ ಸಚಿವರು ಧನ್ಯವಾದ ಅರ್ಪಿಸಿದರು.

Tags: #Saaksha TVDr K SudakarkarnatakaNamma clinic
ShareTweetSendShare
Join us on:

Related Posts

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

by Shwetha
August 4, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ 19 ನೂತನ ಸಚಿವರ ಸೇರ್ಪಡೆಯಾಗಿದೆ. ಆದರೆ ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ...

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

by Shwetha
August 4, 2026
0

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆಯ ಗೊಂದಲಗಳ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಪರೀಕ್ಷಾ ಅಕ್ರಮ...

ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

by Shwetha
August 4, 2026
0

ರಾಮನಗರದ ಐತಿಹಾಸಿಕ ಚಾಮುಂಡೇಶ್ವರಿ ಕರಗ ಮಹೋತ್ಸವಕ್ಕೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದ್ದಾರೆ. ಕರಗ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ದೇವಿಗೆ ಮಡಿಲಕ್ಕಿ ಸೇವೆ ಸಲ್ಲಿಸಿ ವಿಶೇಷ ಪೂಜೆ...

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

by Shwetha
August 4, 2026
0

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಯ ಕುರಿತಾದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭೀಜಿತ್ ದೀಪ್ಕೆ ಅವರು ಪ್ರಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram